Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವದ ಸಮಯ ಸೇವೆಗಳಲ್ಲಿ ವ್ಯತ್ಯಯ

. . . . . . . . .

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಡಿ.12 ರವರೆಗೆ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನೆರವೇರಲಿದ್ದು, ಜಾತ್ರೋತ್ಸವದ ನಿಮಿತ್ತ ಕ್ಷೇತ್ರದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರ ಸೇವೆಯು ನ.25 ರಿಂದ ಡಿ.12ರ ತನಕ ನೆರವೇರುವುದಿಲ್ಲ. ಡಿ.13 ರಿಂದ ಸರ್ಪ ಸಂಸ್ಕಾರ ಸೇವೆ ಆರಂಭವಾಗಲಿದೆ. ಆದರೆ ಇತರ ಸೇವೆಗಳು ಎಂದಿನಂತೆ ನೆರವೇರುತ್ತವೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಹಾಗೂ ಷಷ್ಠಿಯ ದಿನ ಕೆಲವೊಂದು ಸೇವೆಗಳು ನೆರವೇರುವುದಿಲ್ಲ, ಭಕ್ತಾದಿಗಳು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.
ಲಕ್ಷದೀಪೋತ್ಸವ(ನ.30), ಚೌತಿ(ಡಿ.05), ಪಂಚಮಿ(ಡಿ.06) ದಿನದಂದು ರಾತ್ರಿ ಸಮಯದಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ(ಡಿ.07) ದಿನದಂದು ಮದ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಚಂಪಾಷಷ್ಠಿ ದಿನ ಆಶ್ಲೇಷ ಬಲಿ ಹಾಗೂ ನಾಗಪ್ರತಿಷ್ಠೆ ಸೇವೆಗಳು ನೆರವೇರುವುದಿಲ್ಲ. ಲಕ್ಷದೀಪೋತ್ಸವ(ನ.30), ಚೌತಿ(ಡಿ.05), ಪಂಚಮಿ(ಡಿ.06), ಚಂಪಾಷಷ್ಠಿ(ಡಿ.07), ಮತ್ತು ಕೊಪ್ಪರಿಗೆ ಇಳಿಯುವ ಮಹಾಸಂಪ್ರೋಕ್ಷಣೆಯ ದಿನ(ಡಿ.12) ರಂದು ಪಂಚಾಮೃತ ಮಹಾಭಿಷೇಕ ಸೇವೆ ನಡೆಯುವುದಿಲ್ಲ. ನ.27 ರಿಂದ ಡಿ.12 ರವರೆಗೆ ಸಾಯಂಕಾಲದ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ಚಂಪಾಷಷ್ಠಿ ಜಾತ್ರೋತ್ಸವವು ನ.27 ರಿಂದ ಡಿ.12 ರವರೆಗೆ ನೆರವೇರಲಿದ್ದು, ಜಾತ್ರೋತ್ಸವದ ಪ್ರಧಾನ ದಿನಗಳಾದ ಲಕ್ಷದೀಪ, ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಾತ್ರ ಕೆಲವೊಂದು ಸೇವೆಗಳನ್ನು ನೆರವೇರಿಸಲು ಅವಕಾಶ ಇರುವುದಿಲ್ಲ. ಆದರೆ ಇತರೆ ದಿನಗಳಲ್ಲಿ ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ಶೇಷಸೇವೆ, ಕಾರ್ತಿಕಪೂಜೆ, ಮಹಾಪೂಜೆ, ತುಲಾಭಾರ, ನಾಗಪ್ರತಿಷ್ಠೆ ಮೊದಲಾದ ಸೇವೆಗಳು ಎಂದಿನಂತೆ ನೆರವೇರಲಿದೆ.
ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಸೇವೆಗಳು ಡಿ.12ರ ತನಕ ನೆರವೇರುವುದಿಲ್ಲ.
ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ನ.26 ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಪವಿತ್ರ ಕಾರ್ಯದ ನಿಮಿತ್ತ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮದ್ಯಾಹ್ನ 2:00 ಗಂಟೆಯವರೆಗೆ ಶ್ರೀ ದೇವರ ದರುಶನ ಹಾಗೂ ಸೇವಾಧಿಗಳನ್ನು ನೆರವೇರಿಸಲು ಅವಕಾಶ ಇರುವುದಿಲ್ಲ. 2:00 ಗಂಟೆಯ ನಂತರ ಶ್ರೀ ದೇವರ ದರ್ಶನಕ್ಕೆ ಹಾಗೂ ಆಯ್ದ ಸೇವೆಗಳನ್ನು ನೆರವೇರಿಸಲು ಅವಕಾಶವಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading