Ad Widget

ಗ್ರಾಮ ಪಂಚಾಯತ್ ಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪಂಚಾಯತ್ ರಾಜ್ ಸಮಾವೇಶ ನಡೆಸಲು ತೀರ್ಮಾನ – ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು

. . . . . . . . .

ಗ್ರಾಮ ಪಂಚಾಯಿತಿಗಳು ಎದುರಿಸುತ್ತಿರುವ ಹತ್ತು ಹಲವು ಸಮಸ್ಯೆಗಳಿಗೆ ಮತ್ತು ಅನುದಾನದ ಕೊರತೆಗಳಿಗಾಗಿ ಪಂಚಾಯಿತಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಂದ ಆಯ್ಕೆಯಾದ ಅವಿಭಜಿತ ದ. ಕ. ಜಿಲ್ಲೆಯ ಎರಡು ಜನ ವಿಧಾನ ಪರಿಷತ್ತಿನ ಸದಸ್ಯರು ಮತ್ತು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರೊಂದಿಗೆ ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಸದಸ್ಯರೊಳಗೂಡಿ ಮುಖಮುಖಿ ಚರ್ಚೆ ನಡೆಸಲು ಡಿ 4 ಬುಧವಾರ ದಂದು ಬೆಳಿಗ್ಗೆ ಗಂಟೆ 10.30ಕ್ಕೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ “ಪಂಚಾಯತ್ ರಾಜ್ ಸಮಾವೇಶ” ನಡೆಸಲು ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರುಗಳ ಒಕ್ಕೂಟ ನಿರ್ಧರಿಸಿದೆ ಎಂದು ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಹೇಳಿದರು.

. . . . . . .

ಅವರು ಪತ್ರಿಕಾಗೋಷ್ಠಿಯಲ್ಲಿ ಸಮಾವೇಶದ ವಿವರ ನೀಡಿದರು. ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಜತೆಗೆ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಜೊತೆಗೂಡಿ ಗ್ರಾಮ ಪಂಚಾಯಿತಿಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಜನಪ್ರತಿನಿಧಿಗಳೊಂದಿಗೆ ಮಂಡಿಸಿ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾವಿಸಿ ಬಗೆಹರಿಸುವ ನಿಟ್ಟಿನಲ್ಲಿ ಹಕ್ಕೊಂತ್ತಾಯ ಮಂಡಿಸಲು ನಿರ್ಧರಿಸಲಾಗಿದೆ. ಗ್ರಾಮಪಂಚಾಯಿತಿಗಳಲ್ಲಿ, ಜಲಜೀವನ್ ಮಿಷನ್ ಕಾಮಗಾರಿಗಳ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಲೋಪದೋಷಗಳು, ಸಾಮಾಜಿಕ ಪರಿಶೋದನೆಯ ಬಗ್ಗೆ ಮತ್ತು ಕೇರಳ ಮಾದರಿಯ ಯೋಜನೆ ರೂಪಿಸಲು ಕ್ರಮ, ಸಿಬ್ಬಂದಿ ನೇಮಕಾತಿಯಲ್ಲಿ ಆಗುತ್ತಿರುವ ವಿಳಂಬ, ತಾಲೂಕಿನ ಅರ್ಧಕ್ಕಿಂತ ಹೆಚ್ಚಿನ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿಗಳ ಅಧಿಕಾರಿಗಳು ಇಲ್ಲದಿರುವುದು ಮತ್ತು ತಾಲೂಕು ಪಂಚಾಯತ್ ಸಿಬ್ಬಂದಿಗಳ ಕೊರತೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗದಲ್ಲಿ ಸಹಾಯತ ಅಭಿಯಂತರರ ಕೊರತೆ, ಹೆಚ್ಚಿನ ಅನುದಾನಕ್ಕಾಗಿ ಬೇಡಿಕೆ, ಕುಡಿಯುವ ನೀರಿನ ವಿದ್ಯುತ್ ಬಿಲ್ಲುಗಳಿಗೆ ವಿನಾಯಿತಿ ಮತ್ತು ಗ್ರಾಮಪಂಚಾಯತ್ ಸದಸ್ಯರುಗಳು ಎದುರಿಸುತ್ತಿರುವ ಸಮಸ್ಯೆಗಳು ಸೇರಿ ಹಲವು ಸಮಸ್ಯೆಗಳನ್ನು ತಮ್ಮಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಪ್ರಬಲವಾಗಿ ಮಂಡಿಸಲು ತೀರ್ಮಾನಿಸಲಾಗಿದೆ. ಮತ್ತು ಈ ಸಭೆಗೆ ಎಲ್ಲಾ ಗ್ರಾಮಪಂಚಾಯತ್ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಕೇಶವ ಅಡ್ತಲೆ, ಮಹೇಶ್ ಕರಿಕ್ಕಳ, ಹರೀಶ್ ರೈ ಉಬರಡ್ಕ, ಬಾಲಕೃಷ್ಣ ಕೀಲಾಡಿ, ರವೀಂದ್ರ ರೈ ಬಾಳಿಲ, ಗೀತಾ ಹೊಸೋಳಿಕೆ ಮರ್ಕಂಜ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading