ಎಲ್ಲಾ ಇಲಾಖೆಯ ಅಧಿಕಾರಿ ಬಂದಿಲ್ಲ ಹಾಗೂ ಗ್ರಾಮಸ್ಥರು ಕಡಿಮೆ ಸಂಖ್ಯೆಯಲ್ಲಿದ್ದಾರೆಂದು ಕೆಲ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ, ಕಪ್ಪು ಪಟ್ಟಿ ಪ್ರದರ್ಶಿಸಿ, ಸಭಾತ್ಯಾಗ ಮಾಡಿದ ಘಟನೆ ನ.30 ರಂದು ನಡೆದ ಚೆಂಬು ಗ್ರಾಮಸಭೆಯಲ್ಲಿ ವರದಿಯಾಗಿದೆ.
ಗ್ರಾಮಸಭೆ ಆರಂಭವಾಗುತ್ತಿದ್ದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಬಾರದೇ ಇದ್ದರೇ ಗ್ರಾಮ ಸಭೆ ಮಾಡುವುದು ಬೇಡ ಎಂದು ಗ್ರಾಮಸ್ಥರು ಒತ್ತಾಯಿಸಿದರು. ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೇ ಎಲ್ಲಾ ಅಧಿಕಾರಿಗಳು ಬೇಕು, ಅದೂ ಅಲ್ಲದೇ ಸಭೆ ನಡೆಯಲು ಕೋರಂ ಇಲ್ಲ. ಆದ್ದರಿಂದ ಗ್ರಾಮಸಭೆ ಮುಂದೂಡಿ ಎಂದು ಗ್ರಾಮಸ್ಥರು ಹೇಳಿದರು. ಈ ವೇಳೆ ಆಧ್ಯಕ್ಷರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿಯು ನಡೆಯಿತು.
ಅಧಿಕಾರಿಗಳು ಬಾರದೇ ಗ್ರಾಮಸಭೆ ನಡೆಸುವುದನ್ನು ಖಂಡಿಸಿ ಕಪ್ಪು ಪಟ್ಟಿ ಪ್ರದರ್ಶಿಸಿ ಕೆಲ ಗ್ರಾಮಸ್ಥರು ಸಭಾತ್ಯಾಗ ಮಾಡಿದರು.