ರವಿವಾರ ಸಂಜೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಕಾಡಾನೆಯೊಂದು ಸಂಚರಿಸಿದ್ದು, ಇದರ ಮಾಹಿತಿ ಬೆನ್ನಲ್ಲೇ ಅರಣ್ಯ ಇಲಾಖೆ ಸ್ಥಳ ಪರಿಶೀಲನೆ ನಡೆಸಿದ್ದು, ಕಾಡಾನೆ ಅರಣ್ಯದೊಳಗೆ ಸೇರಿರುವ ಬಗ್ಗೆ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕಾಡಾನೆ ಮೇಲೆ ನಿಗಾ ಇಡಲು ಅರಣ್ಯ ಇಲಾಖೆ ತಂಡ ರಚಿಸಿದೆ. ಕಾಡಾನೆ ಕಂಡುಬಂದಲ್ಲಿ ಸಾರ್ವಜನಿಕರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಪುತ್ತೂರು ಸಹಾಯಕ ಆಯುಕ್ತ, ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ. ಅಲ್ಲದೇ ದೇಗುಲದ ಮೈಕ್ ಪಾಯಿಂಟ್ ನಿಂದ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಲಾಗುತ್ತಿದ್ದು, ಸ್ಥಳೀಯರು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಲಾಗುತ್ತಿದೆ.
- Wednesday
- December 4th, 2024