ಕರ್ನಾಟಕ ಅರೆಬಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವಕ್ಕೆ ಇಂದು ಮಂಡೆಕೋಲು ಸಾಕ್ಷಿಯಾಗಿದೆ. ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಅದ್ದೂರಿ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಗೌಡರ ಯುವ ಸೇವಾ ಸಂಘದ ಪೂರ್ವಾಧ್ಯಕ್ಷ ಜಾಕೆ ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬೆಳಗ್ಗೆ ಆರಂಭಗೊಂಡ ಅದ್ದೂರಿ ಮೆರವಣಿಗೆಯನ್ನು ಪ್ರಗತಿಪರ ಕೃಷಿಕ ಹಾಗೂ ಸಾಮಾಜಿಕ ಧುರೀಣ ಕುಶಾಲಪ್ಪ ಗೌಡ ಕುಕ್ಕೇಟಿ ಉದ್ಘಾಟಿಸಿದರು. ಚೆಂಡೆ ವಾದ್ಯ ಮೇಳಗಳು, ಕುಣಿತ ಭಜನೆಯೊಂದಿಗೆ ಆಕರ್ಷಕ ಮೆರವಣಿಗೆಗೆ ವಿಶೇಷ ಆಕರ್ಷಣೆ ನೀಡಿತು. ವಿವಿಧ ಕಾರ್ಯಕ್ರಮಗಳ ಬಳಿಕ ಸಂಜೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ.