
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಡಿ.12 ರವರೆಗೆ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನಡೆಯುತ್ತಿದೆ. ನ.27 ರಂದು ಕೊಪ್ಪರಿಗೆ ಏರುವುದರೊಂದಿಗೆ ಜಾತ್ರಾ ಮಹೋತ್ಸವವು ಪ್ರಾರಂಭಗೊಂಡಿದ್ದು, ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.07ರ ಶನಿವಾರ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ನೆರೆದಿದ್ದ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ “ಚಂಪಾಷಷ್ಠಿ ಮಹಾರಥೋತ್ಸವ” ವು ಜರುಗಿತು.
ಸುವರ್ಣವೃಷ್ಠಿಯಾಗಿ ಚಿಕ್ಕ ರಥೋತ್ಸವವು ಜರುಗಿತು. ನಂತರ ಚಂಪಾಷಷ್ಠಿ ಮಹಾರಥೋತ್ಸವವು ಜರುಗಿತು. ಬಳಿಕ ಷಷ್ಠಿ ಕಟ್ಟೆಯಲ್ಲಿ ಹಾಗೂ ಒಳಾಂಗಣ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನೆರವೇರಿತು.
ನಾಳೆ ಡಿ.08 ರಂದು ಅವಭೃತೋತ್ಸವ, ನೌಕಾವಿಹಾರ ನಡೆಯಲಿದ್ದು, ಡಿ.12 ರಂದು ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ ಉತ್ಸವ ಹಾಗೂ ದೈವಗಳ ನಡಾವಳಿ ನಡೆಯಲಿದೆ.