
ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ ಕ ಕರ್ನಾಟಕ. ಇದರ ವತಿಯಿಂದ ಕಸ್ತೂರಿ ರಂಗನ್ ವರದಿ ಜಾರಿಯಿಂದ ಬಾಧಿತರಾಗುವ ಸುಳ್ಯದ ತಾಲೂಕಿನ ಗ್ರಾಮಗಳ ಗ್ರಾಮಸ್ಥರ ಸಭೆ ಡಿ.09 ರಂದು ನೆಲ್ಲೂರುಕೆಮ್ರಾಜೆ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.
ಕಸ್ತೂರಿ ರಂಗನ್ ವರದಿ ಜಾರಿಯನ್ನು ಎಲ್ಲಾ ಗ್ರಾಮಸ್ಥರು ಒಕ್ಕೊರಲಿನಿಂದ ವಿರೋಧಿಸುವ ಕುರಿತು ಸಂಚಾಲಕರಾದ ಕಿಶೋರ್ ಶಿರಾಡಿ ನೇತೃತ್ವ ದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಮ್ಮ ಹೋರಾಟವನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ತಯಾರಾಗಬೇಕು ಅಲ್ಲದೆ ಈ ತಿಂಗಳೊಳಗೆ ಪ್ರತಿ ಗ್ರಾಮಗಳಲ್ಲಿ ಮತ್ತೊಂದು ಸುತ್ತಿನ ಪ್ರಚಾರ ನಡೆಸಿ ನಂತರ ಮುಂದಿನ ಹೋರಾಟಗಳಿಗೆ ತಾವೆಲ್ಲರೂ ಸಿದ್ದರಾಗಬೇಕು ಎಂದು ಕಿಶೋರ್ ಶಿರಾಡಿ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಸೈಯದ್ ಮೀರಾ ಸಾಹೇಬ್ ನಾವೆಲ್ಲರೂ ಅನೇಕ ಹೋರಾಟಗಳನ್ನು ಮಾಡಿ ಕೇಸು ಹಾಕಿಸಿಕೊಂಡಿದ್ದೇವೆ. ಹಾಗಾಗಿ ಮುಂದೆಯೂ ನಮ್ಮ ಹೋರಾಟಗಳು ನಿರಂತರವಾಗಿ ನಡೆಯುತಲೇ ಇರುತದೆ. ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ತರಲು ಬಿಡುವುದಿಲ್ಲ ಎಂದು ಹೇಳಿದರು. ಚಂದ್ರಶೇಖರ ಬಾಳುಗೋಡು ಮುಂದಿನ ಹೋರಾಟದ ದಿನಾಂಕ ವನ್ನು ಗ್ರಾಮಸ್ಥರಿಗೆ ತಿಳಿಸಿದರು ಹರೀಶ್ ಬಳ್ಳಡ್ಕ ವಂದಿಸಿದರು. ಸಭೆಗೆ ಸುಳ್ಯ ತಾಲೂಕಿನ ಬಾಧಿತ ಗ್ರಾಮದ ಎಲ್ಲಾ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
