- Wednesday
- April 2nd, 2025

ಸುಳ್ಯ ತಾ| ಐವರ್ನಾಡು ಗ್ರಾಮದ ಕುಕ್ಕುಡೇಲು ಕೃಷ್ಣಪ್ಪ ಗೌಡರ ಪುತ್ರ ಕೀರ್ತನ್ ರವರ ವಿವಾಹ ನಿಶ್ಚಿತಾರ್ಥವು ಕುಶಾಲನಗರ ತಾ| ಬಾಳುಗೋಡು ಗ್ರಾಮದ ಪೂಜಾರಿಮನೆ ದಿ.ರಾಮಯ್ಯ ಗೌಡರ ಪುತ್ರಿ ಹರ್ಷಿತಾ ರೊಂದಿಗೆ ನ.11 ರಂದು ಕುಶಾಲನಗರದ ಗೌಡ ಸಮಾಜದಲ್ಲಿ ನಡೆಯಿತು.

2024-25ನೇ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ವತಿಯಿಂದ 2024-25ನೇ ಸಾಲಿಗೆ 5 ವಾರದ ತಲಾ 20 ಕೋಳಿ ಮರಿಗಳನ್ನು ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 291 ಭೌತಿಕ ಗುರಿ ನಿಗದಿಪಡಿಸಲಾಗಿದೆ. ಪ.ಜಾತಿಗೆ...

ಸುಳ್ಯದಲ್ಲಿ ನಡೆದ ಘಟನೆ ಸುಳ್ಯ ಜ್ಯೋತಿ ಸರ್ಕಲ್ ಬಳಿ ಮೇಲಿನ ಕಾನತ್ತಿಲ ಕಟ್ಟಡದಲ್ಲಿ ವೆಲ್ಡಿಂಗ್ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಜ್ಯೋತಿ ಸರ್ಕಲ್ ಬಳಿಯ ಕಟ್ಟಡದ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ಕುಸಿದು ಬಿದ್ದರೆನ್ನಲಾಗಿದೆ.ಅಲ್ಲಿ ಸೇರಿದ್ದ ಸ್ಥಳೀಯರು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ತಲುಪುಷ್ಟರಲ್ಲಿ ಮೃತಪಟ್ಟಿದ್ದರು.ಮೃತಪಟ್ಟ ವ್ಯಕ್ತಿ...

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ 2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರೀಡೋತ್ಸವ ನಡೆಯಿತು. ಈ ಕ್ರೀಡಾಕೂಟವನ್ನು ದಿನಕರ.ಡಿ ದೈಹಿಕ ಶಿಕ್ಷಣ ಶಿಕ್ಷಕರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರು ಧ್ವಜಾರೋಹಣಗೈದರು,ಮಾಧವ.ಬಿ.ಕೆ ಅಧ್ಯಕ್ಷರು ತಾಲೂಕು ಕಬ್ಬಡಿ ಅಸೋಸಿಯೇಷನ್ ಸುಳ್ಯ ಇವರು ಜ್ಯೋತಿ ಬೆಳಗಿಸಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು, ಮುಖ್ಯ ಅತಿಥಿಗಳಾಗಿ ಡಾ|ಉದಯಕುಮಾರ್. ಕೂಜುಗೋಡು, ಧನ್ವಂತರಿ ಕ್ಲಿನಿಕ್...

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನಾಚರಣೆ ಪ್ರಯುಕ್ತ ಕೆ.ವಿ.ಜಿ. ಸುಳ್ಯ ಹಬ್ಬವನ್ನು ದ.25 ಮತ್ತು ದ.26 ರಂದು ಏರ್ಪಡಿಸಲಾಗುತ್ತಿದ್ದು, ಈ ಬಾರಿಯ ಸುಳ್ಯಹಬ್ಬದ ಆಮಂತ್ರಣ ಪತ್ರ ಬಿಡುಗಡೆ ಇಂದು ನಡೆಯಿತು. ಸಮಿತಿಯ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಸಮಿತಿಯ ಸ್ಥಾಪಕಾಧ್ಯಕ್ಷ ಎನ್.ಜಯಪ್ರಕಾಶ ರೈ ಮತ್ತು...

ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವವು ಡಿ.10ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ “ವಿದ್ಯಾರ್ಥಿಗಳು ಶಿಕ್ಷಣ ಸಾಂಸ್ಕೃತಿಕ ಕ್ರೀಡೆಯಂತಹ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ವಿದ್ಯಾರ್ಥಿ ಜೀವನಕ್ಕೆ ಮೆರುಗು ಬರವಂತಹದ್ದು. ಈ ನಿಟ್ಟಿನಲ್ಲಿ ಇಂತಹ...

ಪೆರಾಜೆ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರು, ಪೆರಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ, ಬಿಜೆಪಿ ಹಿರಿಯ ಮುಖಂಡರಾಗಿದ್ದ ಅಮಚೂರು ಎ.ಸಿ. ಹೊನ್ನಪ್ಪ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾದರು. ಇವರಿಗೆ 72 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದ ಬೈನ್ ಹ್ಯಾಮರೇಜ್ ಗೊಳಗಾಗಿದ್ದ ಇವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು, ಬಳಿಕ ಮಂಗಳೂರು ಆಸ್ಪತ್ರೆಗೆ...

ಗುತ್ತಿಗಾರು:2015ರಲ್ಲಿ ಕೆವಿಜಿ ಪಾಲಿಟೆಕ್ನಿಕ್ ಸುಳ್ಯ ಇಲ್ಲಿ ಹುಟ್ಟಿಕೊಂಡ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್(ರಿ) ಸುಳ್ಯ ಎನ್.ಎಸ್.ಎಸ್ ಹಿರಿಯ ವಿದ್ಯಾರ್ಥಿಗಳ ಸಂಘ ಕರ್ನಾಟಕ ಇದರ ದಶಮಾನೋತ್ಸವದ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿಗೆ ವಿದ್ಯಾರ್ಥಿಗಳ ಕಲಿಕೆಗೆ ಸಹಾಯವಾಗುವ ನಿಟ್ಟಿನಲ್ಲಿ ನೀಡಿದ ಸ್ಮಾರ್ಟ್ ಕ್ಲಾಸ್ ಇದರ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಸ್ಮಾರ್ಟ್ ತರಗತಿಯ ಉದ್ಘಾಟನೆಯನ್ನು ಪುರುಷೋತ್ತಮ...

ಕಸ್ತೂರಿರಂಗನ್ ವರದಿ ಜಾರಿ ಗೊಳಿಸಬಾರದು ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತದೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ನವೆಂಬರ್ 15ರಂದು ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಮಾಡ ಮೈದಾನದಲ್ಲಿ ನಡೆದ ಪ್ರತಿಭಟನೆಯ ವೇಳೆ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು. ಇದರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಸುಳ್ಯ...