ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ 2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರೀಡೋತ್ಸವ ನಡೆಯಿತು. ಈ ಕ್ರೀಡಾಕೂಟವನ್ನು ದಿನಕರ.ಡಿ ದೈಹಿಕ ಶಿಕ್ಷಣ ಶಿಕ್ಷಕರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರು ಧ್ವಜಾರೋಹಣಗೈದರು,ಮಾಧವ.ಬಿ.ಕೆ ಅಧ್ಯಕ್ಷರು ತಾಲೂಕು ಕಬ್ಬಡಿ ಅಸೋಸಿಯೇಷನ್ ಸುಳ್ಯ ಇವರು ಜ್ಯೋತಿ ಬೆಳಗಿಸಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು, ಮುಖ್ಯ ಅತಿಥಿಗಳಾಗಿ ಡಾ|ಉದಯಕುಮಾರ್. ಕೂಜುಗೋಡು, ಧನ್ವಂತರಿ ಕ್ಲಿನಿಕ್ ಗುತ್ತಿಗಾರು ಇವರು ಕ್ರೀಡೋತ್ಸವಕ್ಕೆ ಶುಭಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್ಮ.ಪಿ ಇವರು ವಹಿಸಿದ್ದರು, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೇಶವ.ಕಾಂತಿಲ,ಸಿ.ಬಿ.ಸಿ ಸದಸ್ಯರಾದ ಲೀಲಾಧರ ಗುಡ್ಡೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆನಂದ ಕೆಂಬಾರೆ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಚಟುವಟಿಕೆಗಳು ಹಾಗೂ ಮಧ್ಯಾಹ್ನ ನಂತರ ಪೋಷಕರಿಗೆ ಮತ್ತು ಹಿರಿಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆದವು.ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆ ಇದರ ದೈಹಿಕ ಶಿಕ್ಷಣ ಶಿಕ್ಷಕರಾದ ರಮೇಶ್.ಕೆ ಸಹಕರಿಸಿದರು.
- Wednesday
- December 11th, 2024