ಸುಳ್ಯದಲ್ಲಿ ಕಳೆದ 40 ವರ್ಷಗಳಿಂದ ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಈ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಗೋಕುಲ್‌ದಾಸ್ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಡಿ.28 ರಂದು ನಡೆಯಲಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದ್ದಾರೆ.
ಅವರು ಪ್ರೆಸ್ ಕ್ಲಬ್ ನಲ್ಲಿ ಆಮಂತ್ರಣ ಬಿಡುಗಡೆಗೊಳಿಸಿ ಕಾರ್ಯಕ್ರಮದ ಬಗ್ಗೆ ವಿವರ ನೀಡಿದರು. ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಡಿ.28 ರಂದು ನಡೆಯುವ ಸಾರ್ವಜನಿಕ ಅಭಿನಂದನಾ ಸಮಾರಂಭದ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಅಭಿನಂದನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ, ಬಿ. ರಮಾನಾಥ ರೈ, ಎಸ್. ಅಂಗಾರ, ಶ್ರೀಮತಿ ಶಶಿಕಲಾ ನೀರಬಿದಿರೆ, ಪದ್ಮರಾಜ್ ಆರ್. ಪೂಜಾರಿ ಉಪಸ್ಥಿತರಿರಲಿದ್ದಾರೆ. ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡಲಿದ್ದಾರೆ.
ಗೌರವ ಉಪಸ್ಥಿತರಾಗಿ ಹೆಚ್.ಎಂ. ನಂದಕುಮಾರ್, ನಿತ್ಯಾನಂದ ಮುಂಡೋಡಿ ಆಗಮಿಸಲಿದ್ದಾರೆ ಎಂದರು.
ಸಮಿತಿ ಉಪಾಧ್ಯಕ್ಷ ನಾರಾಯಣ ಕೇಕಡ್ಕ ಮಾತನಾಡಿ ರಾಜಕೀಯ,ಜಾತಿ, ಧರ್ಮದ ಭೇದವಿಲ್ಲದೇ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡುಗುತ್ತಿದ್ದ ಗೋಕುಲ್ ದಾಸ್ ಅವರ ಅಭಿನಂದನಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಗಮಿಸುವಂತೆ ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರ.ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಉಪಾಧ್ಯಕ್ಷ ಎಸ್. ಸಂಶುದ್ದೀನ್, ತೀರ್ಥರಾಮ ಜಾಲ್ಸೂರು ಭಾಗವಹಿಸಿದ್ದರು.