
ಸೌದೆಗಾಗಿ ಕಾಡಿಗೆ ಹೋಗಿದ್ದ ಸಂದರ್ಭದಲ್ಲಿ ಮಾವ ಹಾಗೂ ಸೊಸೆಯ ಮೇಲೆ ಕಾಡು ಹಂದಿ ದಾಳಿ ನಡೆಸಿದ ಘಟನೆ ಬಾಳುಗೋಡು ಗ್ರಾಮದ ಕೊತ್ನಡ್ಕ ಎಂಬಲ್ಲಿ ವರದಿಯಾಗಿದ್ದು, ಕೊತ್ನಡ್ಕದ ಬಾಬು(ಮಾವ) ಹಾಗೂ ಹರಿಣಾಕ್ಷಿ(ಸೊಸೆ) ಎಂಬುವವರು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಸೌದೆ ತರಲು ಕಾಡಿಗೆ ಹೋಗಿದ್ದ ಸಂದರ್ಭದಲ್ಲಿ ಕಾಡು ಹಂದಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಮಹಿಳೆಯ ತೊಡೆ ಹಾಗೂ ಕಾಲಿಗೆ ಗಾಯವಾಗಿದ್ದು, ಬಾಬು ರವರ ಹೊಟ್ಟೆಗೆ ಗಾಯವಾಗಿದೆ ಎಂದು ತಿಳಿದುಬಂದಿದ್ದು, ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ.
