
ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳವು ಮಾಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.
ಮರ್ಕಂಜ ಗ್ರಾಮದ ಮಿನುಂಗೂರು ದೇವಸ್ಥಾನ ಜೀರ್ಣೋದ್ದಾರ ಗೊಳ್ಳುತ್ತಿದ್ದು, ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಹೊರಗಿನ ಆವರಣದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗಿತ್ತು. ಕಳೆದ ರಾತ್ರಿ ಕಳ್ಳರು ದೇವಸ್ಥಾನಕ್ಕೆ ಬಂದು ಕಾಣಿಕೆ ಡಬ್ಬಿಯನ್ನು ಒಡೆದು ಹಣ ದೋಚಿದ್ದಾರೆನ್ನಲಾಗಿದೆ. ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದು ಕಾಣಿಕೆ ಹಾಕುವ ಸಂದರ್ಭ ಹಣ ಕಳವಾದ ಘಟನೆ ಬೆಳಕಿಗೆ ಬಂದಿದೆ. ಇದೀಗ ಪೋಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
