- Wednesday
- December 18th, 2024
ಬೆಂಗಳೂರಿನ ಟಿ.ಆರ್.ಎಸ್ ಶಿಕ್ಷಣ ಸಂಸ್ಥೆ ಮತ್ತು ಪುತ್ತೂರಿನ ಐ ಆರ್ ಸಿ ಎಮ್ ಡಿ ಶಿಕ್ಷಣ ಸಂಸ್ಥೆ ಜಂಟಿಯಾಗಿ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯನ್ನು ಡಿಸೆಂಬರ್ 8 2024 ರಂದು ಪುತ್ತೂರಿನಲ್ಲಿ ನಡೆಸಲಾಯಿತು. ಈ ಸ್ಪರ್ಧೆಯಲ್ಲಿ 250 ಕ್ಕೂ ಮಿಕ್ಕಿ ಪ್ರತಿಭಾವಂತ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸುವವರ ವೇಗ ನಿಖರತೆ ಮತ್ತು ಮಾನಸಿಕ ಚುರುಕುತನವನ್ನು...
ಸುಬ್ರಹ್ಮಣ್ಯ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ತುಮಕೂರು ಹಾಗೂ ನೇತ್ರಾವತಿ ವಲಯ ಮಂಗಳೂರು ವತಿಯಿಂದ ಡಿಸೆಂಬರ್ 29ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ರಥ ಬೀದಿಯಲ್ಲಿ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ನಡೆಯಲಿರುವುದು. ಈ ಯೋಗ ಶಿಬಿರದಲ್ಲಿ ರಾಜ್ಯಾದ್ಯಂತ ಸುಮಾರು 3000 ಯೋಗಾಸಕ್ತರು ಭಾಗವಹಿಸಲಿರುವರೆಂದು ಸಂಘಟಕರು ತಿಳಿಸಿರುತ್ತಾರೆ.
ಸುಬ್ರಹ್ಮಣ್ಯ, ಡಿ.16: ಶಾಲಾ ಪ್ರವಾಸದ ಅಂಗವಾಗಿ ಬೆಳಗಾವಿ ಸುವರ್ಣಸೌಧಕ್ಕೆ ಭೇಟಿ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ ಕೈಕಂಬ ಸರಕಾರಿ ಪ್ರಾಥಮಿಕ ಶಾಲೆಯ ಸಹಿತ ಇತರೆ ವಿದ್ಯಾರ್ಥಿಗಳಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಭವ ಮಂಟಪದ ಬಗ್ಗೆ ಪಾಠ ಮಾಡಿದರು.ಬಿಳಿನೆಲೆ ಕೈಕಂಬ ಶಾಲೆಯಿಂದ ಶಾಲೆಯ ಸುಮಾರು 33 ಮಕ್ಕಳು ಶಾಲಾ...
ಅರಂತೋಡು ಗ್ರಾಮ ಆಡಳಿತಾಧಿಕಾರಿಗಳ ಕಛೇರಿ ಮುರಿದು ಬೀಳುವ ಹಂತಕ್ಕೆ ತಲುಪಿದೆ. ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಸಾರ್ವಜನಿಕರು ಹಾಗೂ ಸಿಬ್ಬಂದಿಗಳ ಮೇಲೆ ಮುರಿದು ಬೀಳುವ ಮುನ್ನ ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ಈ ಬಗ್ಗೆ ಗಮನ ಹರಿಸುವಂತೆ ಜನತೆ ಒತ್ತಾಯಿಸಿದ್ದಾರೆ.
ತಾಲೂಕಿನಲ್ಲಿ ಫೆಬ್ರವರಿ 2025ರ ಅಂತ್ಯದವರೆಗೆ ರಾಷ್ಟ್ರೀಯ ಕಾರ್ಯಕ್ರಮವಾದ ಜಾನುವಾರು ಗಣತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಶು ಆಸ್ಪತ್ರೆಯ ಸುಳ್ಯ ದಲ್ಲಿ ನಾಯಿ, ಬೆಕ್ಕು ಮತ್ತು ಮುದ್ದು ಪ್ರಾಣಿಗಳ ಚಿಕಿತ್ಸಾ ಸೇವೆಯನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಒದಗಿಸಲಾಗುವುದು. ಮಧ್ಯಾಹ್ನದ ನಂತರ ತಾಲೂಕಿನ ಎಲ್ಲಾ ಸಿಬ್ಬಂದಿಗಳು ಜಾನುವಾರು ಗಣತಿ ಕಾರ್ಯಕ್ರಮ ದಲ್ಲಿ ಕ್ಷೇತ್ರ ಭೇಟಿ...
ಒಂದು ವರ್ಷದ ಹಿಂದೆ ಅಂದರೆ ದಿ.16/12/2023ರ ಇದೇ ದಿನದಂದು ಗುತ್ತಿಗಾರಿನಲ್ಲಿ ಕು.ಸೌಜನ್ಯ ನ್ಯಾಯಪರ ಹೋರಾಟ ನಡೆದು ನ್ಯಾಯಕ್ಕಾಗಿ ಆಗ್ರಹಿಸಲಾಗಿತ್ತು. ಇಂದಿಗೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಸೌಜನ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಸೌಜನ್ಯ ನ್ಯಾಯಕ್ಕಾಗಿ ಪ್ರಾರ್ಥಿಸಲಾಯಿತು. ಕು.ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಗುತ್ತಿಗಾರು ಇದರ ಎಲ್ಲಾ ಪದಾಧಿಕಾರಿಗಳು , ವಾಹನಗಳ ಚಾಲಕ-ಮಾಲಕರು ಭಾಗವಹಿಸಿದರು....
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ದೇವಚಳ್ಳ ಗ್ರಾಮದ ಎಲಿಮಲೆಯ ಸರಕಾರಿ ಪ್ರೌಢ ಶಾಲೆಗೆ, ದೇವಚಳ್ಳ ದ. ಕ. ಜಿ. ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ವಳಲಂಬೆಯ ದ. ಕ. ಜಿ. ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ಪಿ. ಎಂ....
https://youtu.be/UYtw3YlNooQ?si=tT4DW13rOx-pUCr2 ಕಲ್ಮಕಾರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಅಯ್ಯಪ್ಪ ವೃತಧಾರಿ ಗಂಭೀರವಾಗಿ ಗಾಯಗೊಂಡ ಘಟನೆ ಡಿ. 17ರ ಮುಂಜಾನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕಲ್ಮಕಾರು ಗ್ರಾಮದ ಚರಿತ್ ಎಂದು ಗುರುತಿಸಲಾಗಿದ್ದು, ಇಂದು ಮುಂಜಾನೆ ಹೊಳೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಆನೆ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ. ಅಯ್ಯಪ್ಪ ವೃತಧಾರಿ ಚರಿತ್ ಗೆ ಗಂಭೀರ ಗಾಯಗಳಾಗಿದ್ದು, ಸುಳ್ಯದ ಆಸ್ಪತ್ರೆಗೆ ದಾಖಲಾಗಿ, ಬಳಿಕ...
ಫೈಹ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಅಡ್ಕ ಅಜ್ಜಾವರ ಇದರ ವತಿಯಿಂದ ನಡೆದ ಫುಟ್ಬಾಲ್ ಪಂದ್ಯಾಟದ ಬಹುಮಾನ ವಿತರಣೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ,ಕರ್ನಾಟಕ ಸರಕಾರದ ಅರೆಭಾಷೆ ಸಂಸ್ಕೃತ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರು ಬಹುಮಾನ ವಿತರಿಸಿದರು. ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಕಿ ಕಾರ್ಯಕ್ರಮದ ಅಧ್ಯಕ್ಷತೆ...
ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸುಬ್ರಾಯ ಸಂಪಾಜೆಯವರು ಸನ್ಮಾನ ಪಡೆಯಲಿದ್ದಾರೆ. ಸುಳ್ಯದ ಸಂಪಾಜೆಯವರಾದ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸಂಪಾಜೆಯಲ್ಲಿ ಪೂರೈಸಿದ ಸುಬ್ರಾಯರು ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ಬಿ.ಎ. ಓದಿ ಮುಂದೆ ಮಂಗಳೂರು ವಿಶ್ವ ವಿದ್ಯಾಲಯದಿಂದ ಕನ್ನಡ ಎಂ.ಎ. ಪದವಿ ಪಡೆದರು....
Loading posts...
All posts loaded
No more posts