ಮಂಗಳೂರು: ನವದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದ್ರಾಜೆ ಅವರಿಗೆ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಹಿರಿಯ ಪತ್ರಕರ್ತರಾದ ಗಂಗಾಧರ ಮಟ್ಟಿ, ಕೃಷ್ಣ ಬೆಟ್ಟ, ದುರ್ಗಾಕುಮಾರ್ ನಾಯರ್‌ಕೆರೆ ಸನ್ಮಾನ ನೆರವೇರಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ತಾಲೂಕು ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
- Wednesday
- December 18th, 2024