
ಸುಳ್ಯ: ಡಾ. ಕೆ.ವಿ ಚಿದಾನಂದ ಮತ್ತು ಮನೆಯವರಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಗೆ ಶ್ರೀಚೆನ್ನಕೇಶವ ದೇವಸ್ಥಾನದ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಹ್ವಾನ, ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದವನ್ನು ಕುರುಂಜಿ ಕುಟುಂಬವು ಪಡೆದುಕೊಂಡರು .
ಸುಳ್ಯದ ಇತಿಹಾಸ ಪ್ರಸಿದ್ಧ ದೇವಸ್ಥಾನವಾಗಿರುವ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷ ಹಾಗೂ ಹಾಲಿ ಶ್ರೀ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಮತ್ತು ಮನೆಯವರು ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿಯನ್ನು ಸಮರ್ಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಬುಧವಾರ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶೀರ್ವಾದ ಪಡೆದುಕೊಳ್ಳಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷರಾಗಿರುವ ಡಾ. ಕೆ.ವಿ. ಚಿದಾನಂದ, ಎಒಎಲ್ಇ ಉಪಾಧ್ಯಕ್ಷೆ ಶೋಭಾ ಚಿದಾನಂದ, ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಚೆನ್ನಕೇಶವ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಡಾ ಹರಪ್ರಸಾದ್ ತುದಿಯಡ್ಕ ಸೇರಿದಂತೆ ಗಣ್ಯರು ಹಾಜರಿದ್ದರು.