Ad Widget

ಕುಕ್ಕೆ ಸುಬ್ರಹ್ಮಣ್ಯ : ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ – ಕಸ್ತೂರಿ ರಂಗನ್ ವರದಿ ವರದಿ ಸಂಪೂರ್ಣವಾಗಿ ತಿರಸ್ಕಾರ

ಕಸ್ತೂರಿ ರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರಕಾರ ನಿವಾರಣೆ ಮಾಡಿದೆ. ಕಸ್ತೂರಿ ರಂಗನ್ ವರಿಯನ್ನು ನಾವು ತಿರಸ್ಕಾರ ಮಾಡಿದ್ದೇವೆ. ಶತಮಾನಗಳಿಂದ ಇಲ್ಲಿ ಜನರು ವಾಸಿಸುತ್ತಿದ್ದಾರೆ, ಮತ್ತು ಅರಣ್ಯದಂಚಿನ ಜನರೇ ಅರಣ್ಯ ರಕ್ಷಿಸುತ್ತಿದ್ದಾರೆ‌ ಅರಣ್ಯ ರಕ್ಷಣೆಗೆ ಈಗಾಗಲೇ ನಮ್ಮಲ್ಲಿ ಯೋಜನೆಗಳಿವೆ. ಜನರ, ಜನಪ್ರತಿನಿಧಿಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿದ್ದೇವೆ ಎಂದು ಕೇಂದ್ರಕ್ಕೆ ಪುನರುಚ್ಚರಿಸಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದರು. ಜನರು ಪಶ್ಚಿಮ ಘಟ್ಟ ಸಂರಕ್ಷಣೆಗೂ ಆದ್ಯತೆ ನೀಡಬೇಕು ಎಂದರು.
ಜಂಟಿ ಸರ್ವೆಗೆ ಕಂದಾಯ, ಅರಣ್ಯ ಇಲಾಖೆ ಸಚಿವರು, ಅಧಿಕಾರಿಗಳು ಜಂಟಿಯಾಗಿ ಸಭೆ ನಡೆಸಿ ಜಂಟಿ ಸುತ್ತೋಲೆ ಹೊರಡಿಸಿ, ಇಡೀ ಕರ್ನಾಟಕ ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ ಸರ್ವೆ ನಡೆಸಲು ಸಮಿತಿಗಳನ್ನು ರಚಿಸಲಾಗಿದೆ. ಅದರಂತೆ ಮುಂದಿನ ಆರು ತಿಂಗಳಲ್ಲಿ ಜಂಟಿ ಸರ್ವೆ ನಡೆಸಿ ವಾಸ್ತವದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಈ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಯಲಿದೆ ಎಂದರು.
ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಗ್ರಾಮದ ಕಡಮಕಲ್ಲು- ಕೊಡಗಿನ ಗಾಳಿಬೀಡು ಸಂಪರ್ಕ ರಸ್ತೆ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಚರ್ಚಿಸಿ ರಸ್ತೆ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಕುಮಾರಪರ್ವತ ಚಾರಣಿಗರಿಗೆ ಸೌಲಭ್ಯ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದರು. ಕಾಡಾನೆ ದಾಳಿ ನಿಯಂತ್ರಿಸಲು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.
ಕರ್ನಾಟಕದಲ್ಲಿ ಅರಣ್ಯ ನಾಶವಾಗಿದೆ ಎಂಬ ವರದಿ 2021-23ರ ಮಾರ್ಚ್ ವರೆಗಿನ ವರದಿ. ಆ ಸಮಯದಲ್ಲಿ ಈ ಹಿಂದಿನ ಸರಕಾರ ಇದ್ದಿತ್ತು. ಈಗ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಮ್ಮ ಮುಖ್ಯಮಂತ್ರಿಗಳು ಅರಣ್ಯ ಹಸುರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಲಾಗಿದೆ. 2023ರಿಂದ 2025ರಲ್ಲಿ ಕರ್ನಾಟಕ ರಾಜ್ಯದಲ್ಲಿ ಅರಣ್ಯ ಪ್ರದೇಶ ಜಾಸ್ತಿಯಾಗುವ ವಿಶ್ವಾಸ ಇದೆ ಎಂದರು.
ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಡಿ.ಸಿ.ಎಫ್ ಆಂತೋಣಿ ಮರಿಯಪ್ಪ, ಎ.ಸಿ
ಎಫ್ ಪ್ರವೀಣ್ ಕುಮಾರ್, ಆರ್.ಎಫ್.ಓ ಗಳಾದ ವಿಮಲ್ ಬಾಬು, ಮಂಜುನಾಥ್, ಸಂದ್ಯಾ, ದೇವಳದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!