ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು ದಾಖಲಿಸಿದೆ. 12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಾಗೂ ಒಬ್ಬರು ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಹಿಂದುಳಿದ ವರ್ಗ ಎ ಸ್ಥಾನದಿಂದ ಬಿಜೆಪಿಯ ಸರಸ್ವತಿ ಕಕ್ಕಾಡು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 11 ಸ್ಥಾನಗಳಿಗೆ ನಡದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ 10 ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. ಒರ್ವ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಸಾಮಾನ್ಯ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಚೆನ್ನಕೇಶವ. ಡಿ, ದಯಾನಂದ ಪಿ, ಮೋನಪ್ಪ ಪೂಜಾರಿ.ಡಿ, ವೆಂಕಟ್ರಮಣ ಗೌಡ ಕೆ, ನವೀನ. ಕೆ ಆಯ್ಕೆಯಾದರು. ಸಾಮಾನ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ ಅಚ್ಚುತ ಪಿ., ಮಹಿಳಾ ಮೀಸಲು ಸ್ಥಾನದಿಂದ ಬಿಜೆಪಿ ಬೆಂಬಲಿತ ಅಕ್ಷತ.ಕೆ.ಸಿ ಹಾಗೂ ಲತಾ ಹೆಚ್. ಆಯ್ಕೆಯಾದರು. ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಬಿಜೆಪಿಯ ಮಹಾಬಲ ಕೆ, ಅನುಸೂಚಿತ ಜಾತಿ ಮೀಸಲು ಸ್ಥಾನದಿಂದ ಬಿಜೆಪಿ ಬೆಂಬಲಿತ ಅಣ್ಣು ಅಂಗಡಿಮಜಲು, ಅನುಸೂಚಿತ ಪಂಗಡ ಮೀಸಲು ಸ್ಥಾನದಿಂದ ಬಿಜೆಪಿ ಬೆಂಬಲಿತ ಲಿಂಗಪ್ಪ ನಾಯ್ಕ ಆಯ್ಕೆಯಾಗಿದ್ದಾರೆ.