ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಮತ್ತು ಮನೆಯವರಿಂದ ಸಮರ್ಪಣೆಯಾಗಲಿರುವ ನೂತನ ಬ್ರಹ್ಮರಥ ಇದೀಗ ಸುಳ್ಯದ ಜ್ಯೋತಿ ಸರ್ಕಲ್ ಗೆ ಆಗಮಿಸಿದ್ದು, ಜ್ಯೋತಿ ಸರ್ಕಲ್ ಬಳಿಯಿಂದ ಮೆರವಣೆಗೆ ಮುಖಾಂತರ ದೇವಸ್ಥಾನದ ಮುಂಭಾಗಕ್ಕೆ ಬರಲಿದೆ.
ಡಿ.24ರಂದು ಕೋಟೇಶ್ವರದಿಂದ ಹೊರಟ ರಥ ಕನಕಮಜಲು ತಲುಪುತ್ತಿದ್ದಂತೆ ಶ್ರೀ ಆತ್ಮಾರಾಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ರಥಕ್ಕೆ ಆರತಿ ಬೆಳಗಲಾಯಿತು.
ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೃಷನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಉಪಾಧ್ಯಕ್ಷೆ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ., ಕಾರ್ಯದರ್ಶಿಗಳಾದ ಡಾ.ಐಶ್ವರ್ಯ, ಕೆ.ವಿ.ಹೇಮನಾಥ, ಬ್ರಹ್ಮರಥ ಸಮರ್ಪಣಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಯ, ಪ್ರಧಾನ ಕಾರ್ಯದರ್ಶಿ ಡಾ.ಲೀಲಾಧರ ಡಿ.ವಿ ಮತ್ತಿತರರು ಉಪಸ್ಥಿತರಿದ್ದಾರೆ.