ಬೇಡಿಕೆ ಈಡೇರಿಕೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಿ. 30ರಂದು ಕೊಡಗು ಸಂಪಾಜೆ ನಾಡ ಕಚೇರಿ ಮುಂಭಾಗ ಹಮ್ಮಿಕೊಂಡಿದ್ದರು.
ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ನೀಡದೆ ಸತಾಯಿಸುತ್ತಿದೆ. ಆದ್ದರಿಂದ ಡಿ. 30 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವ ಬಗ್ಗೆ ಘೊಷಿಸಿದ್ದರು.
ಇದು ತಿಳಿದ ಕೂಡಲೇ ಡಿ 19 ರಂದು ಮಡಿಕೇರಿ ತಹಶೀಲ್ದಾರ್ ರವರು ಸಂಪಾಜೆ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಮುಖಂಡರೊಂದಿಗೆ ಚರ್ಚಿಸಿ ಸಂಪಾಜೆ ಗ್ರಾಮದ ಸರ್ವೇ ನಂಬರ್ 69/1 ರಲ್ಲಿ 20 ಸೆಂಟ್ಸ್ ಜಾಗವನ್ನು ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಗುರುತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.