ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಡಿ.26 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಜಯ್ ದಿವಸ್ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ಲ| ಸತೀಶ್ ಕೂಜುಗೋಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಮಹೇಶ್ ಕೊಪ್ಪತ್ತಡ್ಕ ಹಾಗೂ ಶ್ರೀಮತಿ ಅನಿತಾ ಮಹೇಶ್ ಕೊಪ್ಪತ್ತಡ್ಕ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಸನ್ಮಾನಿತರ ಪರಿಚಯ ಮಾಡಿದರು.
ಲ| ಸತೀಶ್ ಕೂಜುಗೋಡು ಸ್ವಾಗತಿಸಿ ಲ| ಕೃಷ್ಣಕುಮಾರ್ ಬಾಳುಗೋಡು ಧನ್ಯವಾದ ಸಮರ್ಪಿಸಿದರು. ಲ| ಮೋಹನ್ ದಾಸ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.
- Thursday
- January 9th, 2025