ರೋಟರಿ ಕ್ಲಬ್ ಬೆಳ್ಳಾರೆ ಟೌನ್,ಜೇಸಿಐ ಬೆಳ್ಳಾರೆ, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣಾ ವಿಭಾಗ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಬೆಳ್ಳಾರೆ ಪ್ರಾಥಮಿಕ ರೋಗ್ಯ ಕೇಂದ್ರದಲ್ಲಿ ನಡೆಯಿತು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಚಿಕಿತ್ಸಾ ವೈದ್ಯರಾದ ಡಾ. ಮಂಜುನಾಥ್ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪ್ರಸಾದ್ ನೇತ್ರಾಲಯದ ನೇತ್ರ ತಜ್ಞೆ ಡಾ. ಅನುಷಾ ಕಣ್ಣಿನ ಚಿಕೆತ್ಸೆ ಮತ್ತು ಮುಂಜಾಗೃತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾದ ಅಧ್ಯಕ್ಷೆ ಉಷಾ ಬಿ ಭಟ್,ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಕಿರಣ್ ಉಪಸ್ಥಿತರಿದ್ದರು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ರೈ ಸ್ವಾಗತಿಸಿದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಬೀಡು ವಂದಿಸಿದರು. ಉಮೇಶ್ ಮಣಿಕ್ಕಾರ ಕಾರ್ಯಕ್ರಮ ನಿರ್ವಹಿಸಿದರು. ನೂರಾರು ಮಂದಿ ಶಿಬಿರದ ಪ್ರಯೋಜನ ಪಡೆದರು.
- Thursday
- January 9th, 2025