ಗುತ್ತಿಗಾರು ಪ್ರಾ.ಆ.ಕೇಂದ್ರದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಡಿ. 31ರಂದು ಸೇವಾ ನಿವೃತ್ತಿ ಪಡೆದ ಪದ್ಮವೇಣಿ ಕುಡೆಕಲ್ಲುರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಡಿ. 31ರಂದು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು,ಹಿರಿಯ ಹಾಗೂ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ, ಆಶಾ ಕಾರ್ಯಕರ್ತೆಯರು, ಗುತ್ತಿಗಾರು ಮತ್ತು ಕೊಲ್ಲಮೊಗ್ರ ಪ್ರಾ.ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು. ನಿವೃತ್ತರಾದ ಪದ್ಮವೇಣಿ ಮತ್ತು ಅವರ ಪತಿ ಚಂದ್ರಶೇಖರ ಕುಡೆಕಲ್ಲುರವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು.