- Wednesday
- January 8th, 2025
ಕಲ್ಮಕಾರು ಗ್ರಾಮದ ಕೊಪ್ಪಡ್ಕ ಸುಬ್ರಹ್ಮಣ್ಯ ಕೊಪ್ಪಡ್ಕ ಮತ್ತು ಮೇನಕ ಸುಬ್ರಹ್ಮಣ್ಯ ಇವರು ಬಿಜೆಪಿಯ ತತ್ವ ಸಿದ್ಧಾಂತಗಳಿಗೆ ಬದ್ದವಾಗಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನವೀನ್ ಮುಳುಗಾಡು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ ಇವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.
ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪಿ.ಸಿ.ಜಯರಾಮ ಹಾಗೂ ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆಯಾದ ಹಾಲಿ ನಿರ್ದೇಶಕ ಚಂದ್ರಾ ಕೋಲ್ಟಾರ್ ರವರಿಗೆ ಸಂಘದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮೋಹನರಾಮ್ ಸುಳ್ಳಿ, ನಿರ್ದೇಶಕರುಗಳಾದ ನಿತ್ಯಾನಂದ ಮುಂಡೋಡಿ, ಜಾಕೆ...