ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆಯ ಬದಿಯಲ್ಲಿ ಪಂಚಾಯತ್ ವಠಾರದಿಂದ ಬೆಂಗಮಲೆವರೆಗೆ ನಡೆಯಿತು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರು, ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರು,ನಿರ್ದೇಶಕರು ಹಾಗೂ ಸಿಬ್ಬಂದಿಗಳು,ಐವರ್ನಾಡು ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಐವರ್ನಾಡು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸಿಬ್ಬಂದಿಗಳು ಹಾಗೂ ಊರಿನ ಪ್ರಮುಖರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಲಘು ಉಪಹಾರದ ವ್ಯವಸ್ಥೆ ಮಾಡಿದ್ದರು.
- Tuesday
- January 7th, 2025