ಕೊಲ್ಲಮೊಗ್ರು ಬಂಗ್ಲೆಗುಡ್ಡೆ ಶಾಲೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ, ಪೋಷಕ ವೃಂದ, ಶಿಕ್ಷಕ ವೃಂದ,ಹಿರಿಯವಿದ್ಯಾರ್ಥಿ ಸಂಘ,ಊರ ಮತ್ತು ಪರವೂರ ವಿದ್ಯಾಭಿಮಾನಿಗಳ ಸಹಭಾಗಿತ್ವದೊಂದಿಗೆ ಶಾಲಾ ವಾರ್ಷಿಕೋತ್ಸವ ಮತ್ತು ಶ್ರೀಮತಿ ನಳಿನಿ ಹೊನ್ನಪ್ಪ ಕೊಂದಾಳ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಇವರಿಗೆ ಗುರುವಂದನಾ ಕಾರ್ಯಕ್ರಮ ಜ.4 ರಂದು ನಡೆಯಿತು..
ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಎನ್.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರು. ಶ್ರೀಮತಿ ಮೋಹಿನಿ ಕಟ್ಟ ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಬೊಳಿಯಮ್ಮ ಗಣಪತಿ ಮಾಸ್ತರ್ ಚಾಂತಾಳ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಕೋನಡ್ಕ, ಗಣೇಶ್ ಶಿವಾಲ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಮಲ.ಎ ಇವರು ಉಪಸ್ಥಿತರಿದ್ದರು.
ಕಾರ್ಯಕ್ರಮವು ಪಥಸಂಚಲನದಿಂದ ಪ್ರಾರಂಭವಾಗಿ ವಿದ್ಯಾರ್ಥಿಗಳ ಆಟೋಟ ಸ್ಪರ್ಧೆ, ಹಿರಿಯ ವಿದ್ಯಾರ್ಥಿ ಹಾಗೂ ಪೋಷಕರ ಆಟೋಟ ಸ್ಪರ್ಧೆಗಳು, ಬಹುಮಾನ ವಿತರಣೆಯ ಮೂಲಕ ಕೊನೆಗೊಂಡಿತು. ಮಧ್ಯಾಹ್ನದ ಭೋಜನದ ಹಾಗೂ ಬಹುಮಾನ ಇತರ ವ್ಯವಸ್ಥೆಯನ್ನು ಶಾಲಾ ಪೋಷಕರೇ ಭರಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.