
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ನಡೆಯುತ್ತಿದ್ದು, ಜ.12 ರಂದು ನವೋದಯ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಭ ಹಾರೈಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಲಕ್ಷ್ಮೀಶ ಗಬ್ಲಡ್ಕ ರವರು “ವಿದ್ಯಾರ್ಥಿಗಳಿಗೆ ಮೂಲ ಸಂಸ್ಕಾರದೊಂದಿಗೆ ಉತ್ತಮ ಮಾರ್ಗದರ್ಶನಗಳನ್ನು ನೀಡಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ” ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ “ರಾಷ್ಟ್ರೀಯ ಯುವ ದಿನ” ವನ್ನು ಆಚರಿಸಲಾಯಿತು. ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಸಂಸ್ಥೆಯ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ರವರು ವಿದ್ಯಾರ್ಥಿಗಳಿಗೆ “ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ” ಯನ್ನು ವಿವರಿಸಿದರು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ ಮೋಟ್ನೂರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)