
ಸುಬ್ರಹ್ಮಣ್ಯ : ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘ(ರಿ.) ಸುಬ್ರಹ್ಮಣ್ಯ ಇದರ 14ನೇ ವರ್ಷದ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಸೆ.05 ಬುಧವಾರದಂದು ನಡೆಯಲಿದ್ದು, ಬೆಳಿಗ್ಗೆ 8:00 ಗಂಟೆಯಿಂದ ಶ್ರೀ ವನದುರ್ಗಾ ದೇವಿ ದೇವಸ್ಥಾನದ ವಠಾರದಲ್ಲಿ ಶ್ರೀ ಸಂಪುಟ ನರಸಿಂಹ ಸುಬ್ರಹ್ಮಣ್ಯ ಸ್ವಾಮಿ ಮಠ, ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಆಶೀರ್ವಚನದೊಂದಿಗೆ ಶ್ರೀ ಮಹಾಗಣಪತಿ ಹೋಮ ನಡೆಯಲಿದ್ದು, ಕುಕ್ಕೆಶ್ರೀ ಭಜನಾ ಮಂಡಳಿ ಸುಬ್ರಹ್ಮಣ್ಯ ಇವರಿಂದ ಭಜನೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಸಾಯಂಕಾಲ ಸಂಜೆ 6:00 ಗಂಟೆಯಿಂದ ಅಭಯ ಆಂಜನೇಯ ದೇವಳದ ವಠಾರದಲ್ಲಿ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 8:00 ಗಂಟೆಯಿಂದ ಶಾರದಾ ಆರ್ಟ್ಸ್ ಕಲಾವಿದರು(ರಿ.) ಮಂಜೇಶ್ವರ ಅಭಿನಯದ “ಕಥೆ ಎಡ್ಡೆಂಡು” ತುಳು ಹಾಸ್ಯಮಯ ನಾಟಕ ಪ್ರದರ್ಶನ ನಡೆಯಲಿದೆ.(ವರದಿ : ಉಲ್ಲಾಸ್ ಕಜ್ಜೋಡಿ)