ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಸಿದ್ಧತಾ ತರಗತಿಗಳನ್ನು ನಡೆಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಕೇಂದ್ರದ ಸುಳ್ಯ ಶಾಖೆಯಲ್ಲಿ 2024-25ನೇ ಸಾಲಿನಲ್ಲಿ ನವೋದಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು. ಸಂಸ್ಥೆಯಲ್ಲಿ ನಡೆಸಿದ ನವೋದಯ ಮಾದರಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ವಿಜಯ ಕುಮಾರ್ ಉಬರಡ್ಕ ಬಹುಮಾನ ವಿತರಿಸಿ ಶುಭ ಹಾರೈಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು. ನವೋದಯ ತರಬೇತುದಾರರಾದ ಪ್ರದೀಪ್, ಸುಮಿತ್ರಾ, ಕಾವ್ಯಾoಜಲಿ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸ್ವಾಗತಿಸಿದರು. ಉಪನ್ಯಾಸಕ ಯೋಗೀಶ್ ತಳೂರು ಕಾರ್ಯಕ್ರಮ ನಿರ್ವಹಿಸಿದರು.
- Wednesday
- January 22nd, 2025