ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ಗ್ರಾಮ ಪಂಚಾಯತ್ ಅನುದಾನದ ಮೂಲಕ ನಿರ್ಮಾಣಗೊಂಡಿರುವ ನೂತನ ಬಸ್ ತಂಗುದಾಣ, ಆಟೋರಿಕ್ಷಾ ನಿಲ್ದಾಣ ಹಾಗೂ ಸಾರ್ವಜನಿಕ ಶೌಚಾಲಯದ ಉದ್ಘಾಟನಾ ಸಮಾರಂಭವು ಜ.14 ರಂದು ನಡೆಯಿತು.
ಸಭಾ ಕಾರ್ಯಕ್ರಮ ಹಾಗೂ ನೂತನ ಬಸ್ ತಂಗುದಾಣವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಉದ್ಘಾಟಿಸಿದರು.
ನೂತನ ಆಟೋರಿಕ್ಷಾ ನಿಲ್ದಾಣವನ್ನು ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮುಳಿಯ ಕೇಶವ ಭಟ್ ರವರು ಉದ್ಘಾಟಿಸಿದರು.
ನೂತನ ಸಾರ್ವಜನಿಕ ಶೌಚಾಲಯವನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಸಾಲ್ತಾಡಿ ಇವರುಗಳು ಉದ್ಘಾಟಿಸಿದರು.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ತೆಂಗಿನಕಾಯಿ ಒಡೆಯುವುದರ ಮೂಲಕ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ, ವಿಜಯ ಕುಮಾರ್ ಚಾರ್ಮತ, ಹರೀಶ್ ಕೊಯಿಲ, ಶ್ರೀಮತಿ ಪ್ರಮೀಳಾ ಭಾಸ್ಕರ ಎರ್ಧಡ್ಕ, ಶ್ರೀಮತಿ ಲೀಲಾವತಿ ಅಂಜೇರಿ ಸೇರಿದಂತೆ ಇತರೆ ಹಾಲಿ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಚ್ಚುತ ಗುತ್ತಿಗಾರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರುಗಳು, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರುಗಳು, ಯುವಕ ಯುವತಿ ಮಂಡಲದ ಪದಾಧಿಕಾರಿಗಳು, ಶ್ರೀ ದುರ್ಗಾ ಭಜನಾ ಮಂಡಳಿಯ ಸದಸ್ಯರುಗಳು, ಇನ್ನಿತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಊರಿನ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಚಂದ್ರಶೇಖರ ಬಾಳುಗೋಡು ಸ್ವಾಗತಿಸಿ ಹರಿಶ್ಚಂದ್ರ ಕುಳ್ಳಂಪಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.(ವರದಿ : ಉಲ್ಲಾಸ್ ಕಜ್ಜೋಡಿ)
- Wednesday
- January 22nd, 2025