
ಸುಬ್ರಹ್ಮಣ್ಯದ ಕುಲ್ಕುಂದ ಬಳಿ ಕಾರು-ದ್ವಿಚಕ್ರ ನಡುವೆ ಅಪಘಾತ ಸಂಭವಿಸಿ ಉಪನ್ಯಾಸಕರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜ.15 ಸಂಜೆ ನಡೆದಿದೆ.
ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಎಸ್.ಎಸ್.ಪಿ.ಯು ಕಾಲೇಜಿನ ಉಪನ್ಯಾಸಕ ಶ್ರೀಧರ ಪುತ್ರನ್ ಗಂಭೀರ ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಹ ಸವಾರೆ ಭವ್ಯ ಎಂಬವರು ಸಣ್ಣ ಪ್ರಮಾಣದ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ತುಂಡಾಗಿದ್ದು ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಭದ್ರಾವತಿ ಮೂಲದವರಾಗಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದರ್ಶನಕ್ಕೆ ಬರುತ್ತಿದ್ದರು ಎಂದು ತಿಳಿದು ಬಂದಿದೆ.
