ನೆಲ್ಲೂರು ಕೆಮ್ರಾಜೆಯ ಹಲ್ಲಡ್ಕ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ತಡರಾತ್ರಿ ಕೊಲೆ ಮತ್ತು ಆತ್ಮಹತ್ಯೆ ಪ್ರಕಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಪಶ್ಚಿಮ ವಲಯದ ಐಜಿ ಅಮಿತ್ ಸಿಂಗ್ ಭೇಟಿ ನೀಡಿ ಕೊಲೆ ಮತ್ತು ಆತ್ಮಹತ್ಯೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೃತದೇಹಗಳನ್ನು ತೆಗೆದು ಎರಡು ಆಂಬ್ಯುಲೆನ್ಸ್‌ಗಳಲ್ಲಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ , ಪುತ್ತೂರು ಡಿವೈಎಸ್‌ಪಿ ಅರುಣ್ ನಾಗೇಗೌಡ , ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ ಮತ್ತು ಸಿಬ್ಬಂದಿಗಳು ಸ್ಥಳದಲ್ಲಿದ್ದರು.
- Wednesday
- January 22nd, 2025