ಶಿಕ್ಷಣಕ್ಕೆ ಮಹತ್ವ ನೀಡಬೇಕಾದುದು ನಮ್ಮೆಲ್ಲರ ಕರ್ತವ್ಯ. ಶಾಲೆಗಳಿಗೆ ಸರಕಾರವೇ ಅನುದಾನ ನೀಡಲು ದುಸ್ತರವಾಗಿರುವ ಸಂದರ್ಭ ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ ನೀಡಿದ ಕೊಡುಗೆ ಅಭಿನಂದನಾರ್ಹವಾದುದು. ಸುಳ್ಯಕ್ಕೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳಶ ಪ್ರಾಯದಂತಿದೆ” ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ಅವರು ಸುಳ್ಯದ ಮಹತ್ಮಾಗಾಂಧಿ ಮಲ್ನಾಡು ವಿದ್ಯಾಸಂಸ್ಥೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ತನ್ನ ಬೆಳ್ಳಿಹಬ್ಬದ ಸವಿನೆನಪಿಗಾಗಿ 28 ಲಕ್ಷ ರೂ. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ 3 ತರಗತಿ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಪಿ. ಸಿ. ಜಯರಾಮರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗೌಡರ ಯುವ ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಗ್ರಾ. ಪಂ. ಉಪಾಧ್ಯಕ್ಷೆ ಶ್ರೀಮತಿ ಚಿತ್ರಕುಮಾರಿ ಪಾಲಡ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ, ಎಂ.ಜಿ.ಎಂ. ಶಾಲಾ ಸಂಚಾಲಕ ದೊಡ್ಡಣ್ಣ ಬರೆಮೇಲುರವರು ಶುಭಹಾರೈಸಿದರು.
ವೇದಿಕೆಯಲ್ಲಿ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಕೆ.ಸಿ. ನಾರಾಯಣ ಗೌಡ, ಕೆ.ಸಿ. ಸದಾನಂದ, ಪಿ.ಎಸ್. ಗಂಗಾಧರ, ದಿನೇಶ ಮಡಪ್ಪಾಡಿ, ದಾಮೋದರ ನಾರ್ಕೋಡು, ಹೇಮಚಂದ್ರ ಐ.ಕೆ., ನವೀನ್ ಕುಮಾರ್ ಜೆ.ವಿ., ಶೈಲೇಶ್ ಅಂಬೆಕಲ್ಲು, ಶ್ರೀಮತಿ ಜಯಲಲಿತಾ ಕೆ.ಎಸ್., ಶ್ರೀಮತಿ ಲತಾ ಎಸ್. ಮಾವಜಿ, ಶ್ರೀಮತಿ ನಳಿನಿ ಸೂರಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಹರಿಪ್ರಸಾದ್ ಪಾನತ್ತಿಲ, ಮೊದಲಾದವರಿದ್ದರು. ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾದ ಮೋಹನ್‌ರಾಂ ಸುಳ್ಳಿ ಸ್ವಾಗತಿಸಿ, ವಂದಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು,ದಿನೇಶ್ ಮಡಪ್ಪಾಡಿ ವಂದಿಸಿದರು.
ಶಾಲೆಗೆ ಇಂಟರ್ ಲಾಕ್ ಕೊಡುಗೆ ನೀಡಿದ ಡಾ. ಡಿ ವಿ ಲೀಲಾಧರ್, ಲತಾ ಕುಪ್ಪಾಜೆ, ಹಾಗೂ ವೆಂಕಟ್ರಮಣ ಸೊಸೈಟಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.