Ad Widget

ಯಶಸ್ವಿನಿ ಯೋಜನೆಯು ಸಹಕಾರಿ ಸಂಘದ ಸದಸ್ಯರಿಗೆ ತಾಲೂಕು ಆಸ್ಪತ್ರೆಗಳಲ್ಲಿ ಸೌಲಭ್ಯ ಸಿಗುವಂತಾಗಲು ಪ್ರಯತ್ನಿಸುವಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಮನವಿ

ಸರಕಾರದ “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ”ಯನ್ನು ಸಹಕಾರಿ ಸಂಘದ ಮೂಲಕ ಸದಸ್ಯರಿಗೆ ಜಾರಿಗೊಳಿಸಲಾಗಿದ್ದು, ಸುಳ್ಯ ಮತ್ತು ಪುತ್ತೂರು ತಾಲೂಕು ಮಟ್ಟದಲ್ಲಿ ಯಾವುದೇ ಯಶಸ್ವಿನಿ ನೋಂದಾಯಿತ ಆಸ್ಪತ್ರೆಗಳು ಇಲ್ಲದೇ ಇರುವುದರಿಂದ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಸಿಗದೇ ವಂಚಿತರಾಗುತ್ತಿದ್ದಾರೆ
ಸುಳ್ಯ ತಾಲೂಕಿನಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಪುತ್ತೂರು ತಾಲೂಕಿನ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ ಕೇಂದ್ರ ನಗರವಾಗಿರುವ ಮಂಗಳೂರಿನ ಪ್ರಮುಖ ಹಾಗೂ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಆಸ್ಪತ್ರೆಗಳನ್ನು “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ”ಯಡಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಿ ಸಹಕಾರಿ ಸಂಘದ ರೈತ ಸದಸ್ಯರಿಗೆ ಪ್ರಯೋಜನವಾಗುವಂತೆ ಮಾಡಲು ಡಾ.ರಾಜೇಂದ್ರ ಕುಮಾರ್ ಅಧ್ಯಕ್ಷರು,ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇವರಿಗೆ ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ನೇತೃತ್ವದಲ್ಲಿ ಮನವಿ ಸಲ್ಲಿಸಿದರು.‌

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading