
ಮಾಣಿ ಮೈಸೂರು ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ದುರ್ಘಟನೆ ಯಲ್ಲಿ ಬೈಕ್ ಸವಾರನ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು ಸ್ಥಳೀಯರು ಅವರನ್ನು ಸುಳ್ಯದ ಕೆ ವಿ ಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.ಗಾಯಾಳು ಮೈಸೂರು ಮೂಲದ ಹರೀಶ್ ಎಂಬುವವರಾಗಿದ್ದು ಅವರು ಮಂಗಳೂರು ಕಂಕನಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಎನ್ನಲಾಗಿದೆ.
ಇಂದು ಬೆಳಿಗ್ಗೆ ಮೈಸೂರಿನಿಂದ ತಮ್ಮ ಬೈಕಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
