
ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಕಮಿಟಿ ರಿ.ಇದರ ಆಶ್ರಯದಲ್ಲಿ ನಡೆಸಿಕೊಂಡು ಬರುತ್ತಿರುವ ಮಾಸಿಕ ಜಲಾಲಿಯ ರಾತೀಬ್ ಇದರ ವಾರ್ಷಿಕ ದಿಖ್ರ್ ಮತ್ತು ದುವಾ ಮಜ್ಲಿಸ್ ಕಾರ್ಯಕ್ರಮ ಫೆಬ್ರವರಿ 10 ರಂದು ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಮದ್ರಸ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಮಿಟಿಯ ಮಾಜಿ ಅಧ್ಯಕ್ಷ ಹಾಗೂ ಸಂಘಟಕ ಶರೀಫ್ ಜಟ್ಟಿಪಳ್ಳ ಫೆ.6 ರಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿರುವ ಅವರು ಜಟ್ಟಿಪಳ್ಳ ಪರಿಸರದ ಜನತೆಗೆ ಜಲಾಲಿಯ ರಾತೀಬ್ ಒಂದು ಔಷಧಿ ರೂಪದಲ್ಲಿ ಕಾರ್ಯನಿರ್ವಹಿಸುವಂತಹ ಆಧ್ಯಾತ್ಮಿಕ ಸಂಗಮವಾಗಿದೆ. ನೂರಾರು ಜನರ ಕಷ್ಟ ಕಾರ್ಪಣ್ಯಗಳಿಗೆ ಪರಿಹಾರವನ್ನು ಒದಗಿಸಿಕೊಟ್ಟ ಮಜ್ಲೀಸ್ ಈ ಜಲಾಲಿಯ ರಾತೀಬ್.
ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಪ್ರತಿ ತಿಂಗಳು ಈ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದು ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ವಾರ್ಷಿಕ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಸಂಘಟನೆಯವತಿಯಿಂದ ತೀರ್ಮಾನ ಕೈಗೊಂಡಿದ್ದೇವೆ.
ಈ ಕಾರ್ಯಕ್ರಮದ ನೇತೃತ್ವವನ್ನು ಅಲ್ ಹಾಜ್ ಅಸ್ಸಯ್ಯದ್ ಜಹಪರ್ ಸ್ವಾದಿಕ್ ತಂಙಳ್ ರವರು ನಿರ್ವಹಿಸಲಿದ್ದು ಅಂದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಅಸ್ಸಯ್ಯದ್ ಕುಂಞಿ ಕೋಯ ಸಅದಿ ತಂಙಳ್ ರವರು ಉದ್ಘಾಟಿಸಲಿದ್ದಾರೆ.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸ್ಥಳೀಯ ಮಸೀದಿ ಮುಅಲ್ಲಿಮರುಗಳಾದ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಹಾಗೂ ಸಿರಾಜ್ ಸಅದಿ ಅಲೆಕ್ಕಾಡಿ ಸೇರಿದಂತೆ ಕೇಂದ್ರ ಮಸೀದಿಗಳಾದ ಗಾಂಧಿನಗರ ಹಾಗೂ ಮೊಗರ್ಪಣೆಯ ಆಡಳಿತ ಸಮಿತಿಯ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಉಸ್ತಾದರುಗಳು ಭಾಗವಹಿಸಲಿದ್ದು ವಿವಿಧ ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮತ್ತೋರ್ವ ಮಾಜಿ ಅಧ್ಯಕ್ಷ ರಶೀದ್ ಜಟ್ಟಿಪಳ್ಳ ಮಾತನಾಡಿ ಈ ಒಂದು ಮಜ್ಲೀಸ್ ಕಾರ್ಯಕ್ರಮಕ್ಕೆ ಊರಿನಲ್ಲಿ ಜಾತಿ ಮತ ಮರೆತು ಜನರು ಸಹಕಾರ ನೀಡುತ್ತಾರೆ. ಅಲ್ಲದೆ ಈ ಒಂದು ಕಾರ್ಯಕ್ರಮದಿಂದಾಗಿ ಊರಿನಲ್ಲಿ ಸೌಹಾರ್ದತೆಯ ವಾತಾವರಣವೂ ಕೂಡ ನಮ್ಮಲ್ಲಿ ಕಂಡು ಬರುತ್ತದೆ. ಆದ್ದರಿಂದ ಈ ಕಾರ್ಯಕ್ರಮವನ್ನು ಎಲ್ಲರೂ ಯಶಸ್ವಿಗೊಳಿಸುವಂತೆ ಅವರು ವಿನಂತಿಸಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕರವರು ಮಾತನಾಡಿ ಕಾರ್ಯಕ್ರಮಕ್ಕೆ ಯಶಸ್ವಿಗಾಗಿ ಎಲ್ಲರೂ ಸಹಕರಿಸುವಂತೆ ವಿನಂತಿಸಿ ಕೊಂಡರು.
ಈ ಸಂದರ್ಭದಲ್ಲಿ ಕಮಿಟಿಯ ಅಧ್ಯಕ್ಷರಾದ ಬಶೀರ್ ಬಾಳೆಮಕ್ಕಿ, ಪ್ರಧಾನ ಕಾರ್ಯದರ್ಶಿ ಫೈಝಲ್, ಮಾಜಿ ಅಧ್ಯಕ್ಷರುಗಳಾದ ಎನ್ ಎ ಅಬ್ದುಲ್ಲ,ಹಾಜಿ ವಿ ಕೆ ಅಬೂಬಕ್ಕರ್,ಜಲಾಲಿಯ ಮಜ್ಲಿಸ್ ಉಸ್ತುವಾರಿ ತಾಜುದ್ದೀನ್ ಎಂ ಎಸ್ ಉಪಸ್ಥಿತರಿದ್ದರು.