
ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ವತಿಯಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ ಕಾರ್ಯಕ್ರಮಮನ್ನು ಫೆ. 12 ರಂದು ಬೆಳಿಗ್ಗೆ 11-00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ಸುಳ್ಯ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿರುತ್ತದೆ. ಬಳಿಕ ಅಪರಾಹ್ನ 2.00 ಗಂಟೆಯಿಂದ ಅಪರಾಹ್ನ 3.00 ಗಂಟೆಯವರೆಗೆ ಸಂಪಾಜೆ ಗ್ರಾಮ ಪಂಚಾಯತ್ ಭೇಟಿ ಕಾರ್ಯಕ್ರಮವನ್ನು ನಡೆಯಲಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಸಭೆಗೆ ಭೇಟಿ ನೀಡಲಿದ್ದಾರೆ.
ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ. ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಜನ ಸಂಪರ್ಕ ಸಭೆಯ ಸದುಪಯೋಗವನ್ನು ಪಡೆಯುವಂತೆ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ, ಪೊಲೀಸ್ ಅಧೀಕ್ಷಕರಾದ ನಟರಾಜ ಎಂ ಎ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
