- Saturday
- April 19th, 2025

ಕೊಲ್ಲಮೊಗ್ರದ ಶ್ರೀ ಮಯೂರ ಕಲಾಮಂದಿರದಲ್ಲಿ ನೂತನವಾಗಿ ಶ್ರೀ ಅಯ್ಯಪ್ಪ ಭಜನಾ ಮಂಡಳಿ ಫೆ. 02 ರಂದು ಉದ್ಘಾಟನೆಗೊಂಡಿತು. ಸುಳ್ಯ ತಾಲೂಕಿನ ಭಜನಾ ಪರಿಷತ್ತಿನ ಕಾರ್ಯದರ್ಶಿ ಸತೀಶ್ ಟಿ ಎನ್ ಅವರ ಮಾರ್ಗದರ್ಶನದಲ್ಲಿ ನೀಡಿದರು.ಗೌರವ ಸಲಹೆಗಾರರಾಗಿ ಸತೀಶ್ ಟಿ.ಎನ್., ಗೌರವ ಅಧ್ಯಕ್ಷರಾಗಿ ಮಾಧವ ಚಾಂತಾಳ, ಅಧ್ಯಕ್ಷರಾಗಿ ಹೇಮಂತ್ ದೊಲನ ಮನೆ, ಕಾರ್ಯದರ್ಶಿಯಾಗಿ ತೀರ್ಥರಾಮ ದೋಣಿಪಳ್ಳ ಆಯ್ಕೆಯಾದರು.ಸದಸ್ಯರುಗಳಾಗಿ ಯೋಗೀಶ್...

ರಾಜ್ಯ ಯುವ ಕಾಂಗ್ರೆಸ್ ನ ವಿವಿಧ ಘಟಕಗಳ ಪದಾಧಿಕಾರಿಗಳ ಆಯ್ಕೆ ಗೆ ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷತೆ ನಡೆದ ಚುನಾವಣೆಯಲ್ಲಿ ಚೇತನ್ ಕಜೆಗದ್ದೆ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕೆವಿಜಿ ರೂರಲ್ ಹೆಲ್ತ್ ಕೇರ್ ಟ್ರೈನಿಂಗ್ ಸೆಂಟರ್ ಮತ್ತು ಇಂಟಿಗ್ರೇಟೆಡ್ ಆಯುರ್ವೇದ ಆಸ್ಪತ್ರೆ, ಕೆವಿಜಿ ನರ್ಸಿಂಗ್ ಸೈನ್ಸ್ ಸೋಣಂಗೇರಿ, ಸುಳ್ಯ ಇಲ್ಲಿ ಫೆಬ್ರವರಿ 7 ರಂದು ಪುರೋಹಿತ ಶ್ರೀವರ ಪಾಂಗಣ್ಣಾಯ ಇವರ ವೈದಿಕತ್ವದಲ್ಲಿ ಗಣಪತಿ ಹವನ ವಿದ್ಯುಕ್ತವಾಗಿ ನೆರವೇರಿತು.ಈ ಸಮಾರಂಭದಲ್ಲಿ ಡಾ. ಕೆ. ವಿ ಚಿದಾನಂದ, ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ...

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವವು ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗುತ್ತಿದ್ದು ಫೆ.6 ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವವು ಸಹಸ್ರ ಸಹಸ್ರ ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಡಗರದಿಂದ ಜರುಗಿತು. ಹಾಗೂ ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ...

ಹರಿಹರ ಪಳ್ಳತ್ತಡ್ಕ ನಿವಾಸಿ ಶ್ರೀ ಹರಿಹರೇಶ್ವರ ಯಕ್ಷಗಾನ ಕಲಾ ಸಂಘದ ಸ್ಥಾಪಕಾಧ್ಯಕ್ಷ, ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿದ್ದ ನಾರಾಯಣ ಭೀಮಗುಳಿ ರವರು ಇಂದು(ಫೆ.06) ಸ್ವಗೃಹದಲ್ಲಿ ನಿಧನರಾದರು.ಇವರು ನಾಟಕ ಕಲಾವಿದರು, ಸಂಘಟಕರು ಮಾತ್ರವಲ್ಲದೇ ವಿವಿಧ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಬಲಶಾಲಿ, ಕಡಲಕೇಸರಿ ಪತ್ರಿಕೆಗಳಲ್ಲಿ ವರದಿಗಾರರಾಗಿಯೂ ಇವರು ಕರ್ತವ್ಯವನ್ನು ನಿರ್ವಹಿಸಿದ್ದರು.ಮೃತರಿಗೆ 52 ವರ್ಷ ವಯಸ್ಸಾಗಿತ್ತು.ಮೃತರು ತಂದೆ...

ಸುಬ್ರಹ್ಮಣ್ಯ ಫೆ.6: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್, ಅವರ ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ...

ಹರಿಹರ ಪಳ್ಳತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಫೆ.11 ರಂದು ವಾರ್ಷಿಕ ನೇಮೋತ್ಸವ ನಡೆಯಲಿದ್ದು, ಬೆಳಿಗ್ಗೆ 7:00 ಗಂಟೆಗೆ ಗಣಹೋಮ, ಬೆಳಿಗ್ಗೆ 9:00 ಗಂಟೆಗೆ ಭಂಡಾರ ಹೊರಡುವುದು, ಬೆಳಿಗ್ಗೆ 9:30 ಕ್ಕೆ ಶಿವಪೂಜೆ, ಬೆಳಿಗ್ಗೆ 10:00 ಗಂಟೆಗೆ ಬ್ರಹ್ಮ ರಾಕ್ಷಸ ಪೂಜೆ ಹಾಗೂ ಕಲಶ ಪೂಜೆ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 1:00...