
ಸುಬ್ರಹ್ಮಣ್ಯ ಫೆ.6: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್, ಅವರ ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಸುಬ್ರಹ್ಮಣ್ಯದ ರಾಜಕೀಯ ಮುಖಂಡರಾದ ಗೋಪಾಲ ಎಣ್ಣೆಮಜಲ್, ಕಿಶೋರ್ ಕುಮಾರ್ ಅರಂಪಾಡಿ, ಶಿವರಾಮ ರೈ, ಮಾಸ್ಟರ್ ಪ್ಲಾನ್ ಸಮಿತಿಯ ಲೋಲಾಕ್ಷ ಮತ್ತಿತರರು ಉಪಸ್ಥಿತರಿದ್ದರು.