
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದೆ. ದೆಹಲಿ ವಿಧಾನಸಭಾ ಕ್ಷೇತ್ರದ 70 ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನಗಳಲ್ಲಿ ಗೆಲುವು ಕಂಡಿದೆ.
ವಿಜಯೋತ್ಸವದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ, ರಾಕೇಶ್ ರೈ ಕೆಡೆಂಜಿ,ಆಶಾ ತಿಮ್ಮಪ್ಪ, ವಿನಯಕುಮಾರ್ ಕಂದಡ್ಕ, ಸುಭೋದ್ ರೈ ಮೇನಾಲ, ಕೃಷ್ಣಯ್ಯ ಮೂಲೆತೋಟ, ಕುಸುಮಾಧರ ಎ.ಟಿ., ನಾರಾಯಣ ಶಾಂತಿನಗರ, ನಾಗೇಶ್ ಅಡ್ಕಾರ್ ಮತ್ತಿತರರು ಉಪಸ್ಥಿತರಿದ್ದರು.
