Ad Widget

ಗ್ರಾಮ ಆಡಳಿತಾಧಿಕಾರಿಗಳ ಎರಡನೇ ಹಂತದ ಪ್ರತಿಭಟನೆ , ಮಿನಿ ವಿಧಾನಸೌದ ಖಾಲಿ ಖಾಲಿ !

. . . . . . . . .

ಸುಳ್ಯ: ಸುಳ್ಯ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ತಾಲೂಕಿನ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ವ್ಯತ್ಯಯವಾಗುತ್ತಿದ್ದು ಮಿನಿ ವಿಧಾನಸೌದ ಖಾಲಿಖಾಲಿ ಹೊಡೆಯಲಾರಂಭಿಸಿದ್ದು ಜನರ ಸಮಸ್ಯೆಗಳು ಇನ್ನಷ್ಟು ಹೆಚ್ಚಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿದೆ.

ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ದಿನಾಂಕ:22-09-2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು, ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಸರ್ವಾನುಮತದಿಂದ ದಿನಾಂಕ:26-09-2024 ರಿಂದ 03-10-2024 ರವರೆಗೆ ರಾಜ್ಯಾದ್ಯಂತ ಮುಷ್ಕರ ನಡೆಸಿದ ಕಾರಣ ದಿನಾಂಕ:03-10-2024 ರಂದು ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿರುತ್ತಾರೆ. ಅದರಂತೆ ಆ ದಿನದಿಂದಲೇ ರಾಜ್ಯವ್ಯಾಪಿ ಮುಷ್ಕರವನ್ನು ಹಿಂಪಡೆಯಲಾಗಿರುತ್ತದೆ. ತದನಂತರ ಸರ್ಕಾರವು ಈ ವೃಂದದ ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿರುವುದಿಲ್ಲ ಮತ್ತು ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ ಬದಲಾಗಿ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿರುತ್ತದೆ. ಆದ್ದರಿಂದ ಉಲ್ಲೇಖದ ಸಭೆಯಲ್ಲಿ ಮೇಲ್ಕಂಡ ಎಲ್ಲಾ ಕಾರಣಗಳಿಗಾಗಿ ಮುಷ್ಕರದ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿಗೆ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದ್ದು ಗ್ರಾಮ ಆಢಳಿತಾಧಿಕಾರಿಗಳ ಬೇಡಿಕೆಗಳ ಡೀಟೈಲ್ಸ್ ಈ ಕೆಲಗಿನಂತಿದೆ.

  1. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಗ್ರಾಮ ಆಡಳತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲೈರಾ ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್‌ (12ಜಿಬಿ/256ಜಿಬಿ), ಸಿಯುಜಿ ಸಿಮ್ ಮತ್ತು ಡೇಟಾ • ಗೂಗಲ್ ಕ್ರೋಮ್ ಬುಕ್/ ಲ್ಯಾಪ್ ಟಾಪ್ • ಪ್ರಿಂಟರ್ ಮತ್ತು ಸ್ಕ್ಯಾನರ್ ನೀಡಬೇಕು .
    ಕಂದಾಯ ಇಲಾಖೆಯಿಂದ ನಿರಂತರವಾಗಿ ಅಭಿವೃದ್ಧಿಪಡಿಸಿರುವ ಎಲ್ಲಾ ವೆಬ್/ಮೊಬೈಲ್ ತಂತ್ರಾಂಶಗಳಾದ1. ಸಂಯೋಜನೆ 2. ಇ-ಆಫೀಸ್ 3. ಆಧಾರ್ ಸೀಡ್ 4. ಲ್ಯಾಂಡ್ ಬೀಟ್ 5. ಬಗೈ‌ ಹುಕುಂ 6. ಹಕ್ಕುಪತ್ರ 7. ನಮೂನೆ 1-5 ರ ವೆಬ್ ಅಪ್ಲಿಕೇಷನ್ 8. ಪ್ರೌತಿ ಆಂದೋಲನ ಆಪ್ 9. ಸಂರಕ್ಷಣೆ (ಬೆಳೆ ಕಟಾವು ಮೊಬೈಲ್ ಆಪ್) 10. ಸಿ-ವಿಜಿಲ್ ಆಪ್ 11. ನವೋದಯ 12. ಗರುಡ ಆಪ್ 13. ಭೂಮಿ 14. ಎಲೆಕ್ಟ್-1 15. ವೋಟರ್ ಹೆಲ್ಡ್ ಲೈನ್ 16. ಬೆಳೆ ಸಮೀಕ್ಷೆ 17. ಬೆಳೆ ಸಮೀಕ್ಷೆಯ ಅನುಮೋದನೆ ವೆಬ್ ಆಪ್ 18. ಪಿ.ಎಂ ಕಿಸಾನ್ ವೆಬ್ ಆಪ್ 19. ಕೃಷಿ ಗಣತಿ 20. ನೀರಾವರಿ ಗಣತಿ 21. ದಿಶಾಂಕ್ ಸೇರಿದಂತೆ ಆ್ಯಪ್ ಗಳ ಬಳಕೆಗೆ ಕಂಪ್ಯೂಟರ್ ಮತ್ತು ಇಂಟರ್ ನೆಟ್ ನೀಡುವಂತೆ ಆಗ್ರಹಿಸಲಾಗುತ್ತಿದ್ದು ಅಲ್ಲದೇ ಅಂತರ್ ಜಿಲ್ಲಾ ವರ್ಗಾವಣೆ ,ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು,
    ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ಸುಮಾರು 51.5 ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು. ಅಂತರ್ ಜಿಲ್ಲಾ ವರ್ಗಾವಣೆಯ ಕೆ.ಸಿ.ಎಸ್.ಆರ್. ನಿಯಮ 16 ಎ ರ ಉಪಖಂಡ (೨) ನ್ನು ಮರುಸ್ಥಾಪಿಸುವ ಬಗ್ಗೆ ಅಥವಾ ಇತರೆ ಎಲ್ಲಾ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗ ಸೂಚಿಯನ್ನು ರಚಿಸಬೇಕು. ಕಂದಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಎಲ್ಲಾ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಾಡಬೇಕು. ಕ್ಷೇತ್ರ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವಾಗ ಜೀವಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 50 ಲಕ್ಷ ರೂ.ಗಳ ಪರಿಹಾರ ಮಂಜೂರು ಮಾಡಬೇಕು. ಪೋಲೀಸ್ ಇಲಾಖೆಯಲ್ಲಿರುವಂತೆ ನೂರಾರು ಕೆಲಸಗಳನ್ನು, ನಿರ್ವಹಿಸುವ ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನೊಳಗೊಂಡಂತೆ ಎಲ್ಲಾ ನೌಕರರಿಗೆ ಒಂದು ತಿಂಗಳ ವೇತನವನ್ನು ಹೆಚ್ಚುವರಿ ಮಾಡಿ ಆದೇಶಿಸಬೇಕು. ಪ್ರಯಾಣ ಭತ್ಯೆಗಳನ್ನು ಹೆಚ್ಚು ಮಾಡಬೇಕು.
    ಮನೆ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯನ್ನು ಮಾತ್ರ ನೀಡುವ ಜವಾಬ್ದಾರಿ ನಿರ್ವಹಿಸುವಂತೆ ಆದೇಶಿಸಬೇಕು. ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ/ ತೋಟಗಾರಿಕೆ ಇಲಾಖೆಗಳು ನಿರ್ವಹಿಸುವಂತೆ ಆದೇಶಿಸಬೇಕು. ಮ್ಯುಟೇಷನ್ ಅವಧಿ ದಿನವನ್ನು ವಿಸ್ತರಿಸಬೇಕು ಎಂಬಿತ್ಯಾದಿ ಸುಮಾರು 23 ಕ್ಕು ಹೆಚ್ಚಿನ ಬೇಡಿಕೆಗಳನ್ನು ಈಡೆರಿಸುವಂತೆ ಆಗ್ರಹಿಸಿ ಅನಿರ್ದಿಷ್ಟವಾದಿ ಪ್ರತಿಭಟನೆ ಕೈಗೊಂಡಿದ್ದು ಗ್ರಾಮ ಆಢಳಿತಾಧಿಕಾರಿಗಳ ಪ್ರತಿಭಟನೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘದ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಶಿವರಾಜ್ ಗಾಯಕ್‌ವಾಡ್, ಗೌರವಾಧ್ಯಕ್ಷ ತಿಪ್ಪೇಶ್ , ಕಾರ್ಯದರ್ಶಿ ಶರತ್ ಕುಮಾರ್ ಎಸ್, ಖಜಾಂಜಿ ಅಜ್ಜಯ್ಯ,ಸದಸ್ಯರಾದ ಭಾರತಿ, ಮಾರುತಿ, ಶ್ರಿಕಲಾ ಹರೀಶ್ ಕುಮಾರ್ ಕೆ.ಕೆ.
    ಸುಜನ್ ಕೆ ಆರ್, ಮಧು ಕೆ.ಬಿ, ಚಂದ್ರ ಕುಮಾರ್, ಕುಮಾರ ಸ್ವಾಮಿ, ಶಿವಾಜಿ, ಕಾರ್ತಿಕ್, ಗಾಯತ್ರಿ,ಕವನ,ಶಿವ ಕುಮಾರ್, ಮಂಜುನಾಥ ರಾಜೂರ್, ತೇಜಾವತಿ, ದುರುಗಪ್ಪ ಉಪಸ್ಥಿತಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!