
ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಬೇಟಿ, ಸರಕಾರದ ಗಮನ ಸೆಳೆಯುವ ಭರವಸೆ.
ಸುಳ್ಯ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮ ಆಡಳಿತಾಧಿಕಾರಿಗಳು ಕೈಗೊಂಡಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದ್ದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದ ವತಿಯಿಂದ ಗ್ರಾಮ ಆಡಳಿತಾಧಿಕಾರಿಗಳು ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದು ಪ್ರತಿಭಟನೆಗೆ ಕಾರಣವಾಗಿರುವ ಅಂಶಗಳನ್ನು ಒಳಗೊಂಡ ಮನವಿ ಪತ್ರವನ್ನು ಸುಳ್ಯ ಶಾಸಕಿ ಸ್ವೀಕರಿಸಿ ಸಮಸ್ಯೆಗಳನ್ನು ಸರಕಾರದ ಸಚಿವರ ಗಮನಕ್ಕೆ ತರಲಿದ್ದು ಸೂಕ್ತವಾಗಿ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸುವುದು ಅಲ್ಲದೇ ಈ ಬಗ್ಗೆ ಮುಂದಿನ ಸಭೆಯಲ್ಲಿ ಈ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿ ಗ್ರಾಮ ಆಡಳಿತಾಧಿಕಾರಿಗಳಿಗೆ ಧೈರ್ಯ ತುಂಬಿದರು ಈ ಸಂಧರ್ಭದಲ್ಲಿ ನ.ಪಂ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ, ಪ್ರಮುಖರಾದ ಸುಭೋದ್ ಶೆಟ್ಟಿ ಮೇನಾಲ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
