
ಸುಳ್ಯ: ಗ್ರಾಮ ಆಡಳಿತಾಧಿಕಾರಿಗಳ ರಾಜ್ಯಾದ್ಯಂತ ಅನಿರ್ದಿಷ್ಟವಾದಿ ಪ್ರತಿಭಟನೆ ನಡೆಸುತ್ತಿದ್ದು ಮೂರನೇ ದಿನವಾದ ಇಂದು ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ಗ್ರಾಮ ಆಢಳಿತಾಧಿಕಾರಿಗಳ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಲೋಕಾಯುಕ್ತ ಎಸ್ ಪಿ ನಟರಾಜ್ ಎಂ ಎ ಅಹವಾಲು ಸ್ವೀಕರಿಸಿ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಗಮನ ಸೆಳೆದು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಿದ್ದು ನಿಮ್ಮ ಅಹವಾಲುಗಳು ನೈಜವಾಗಿದ್ದು ಇದನ್ನು ಸರಕಾರಕ್ಕೆ ನಿಮ್ಮ ಪರವಾಗಿ ನಾವು ಮಾಹಿತಿ ನೀಡುವುದಾಗಿ ತಿಳಿಸಿದರು ಅಲ್ಲದೇ ಈ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಗ್ರಾಮಗಳ ಕೆಲವು ಕಡೆಗಳಲ್ಲಿ ಶೌಚಾಲಯದ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು ನಮಗೆ ಕಛೇರಿ , ಕಂಪ್ಯೂಟರ್ , ಪ್ರಿಂಟರ್ ಸೇರಿದಂತೆ ಇತರೆ ಸಮಾಗ್ರಿಗಳನ್ನು ಒದಗಿಸಿ ಕೊಡುವಂತೆ ಬೇಡಿಕೆ ಅನುಗುನವಾಗಿ ಕೆಲಸ ಮಾಡುತ್ತಿದ್ದೆವೆ ಎಂದು ಗ್ರಾಮ ಆಢಳಿತಾಧಿಕಾರಿಗಳು ಅಹವಾಲು ಸ್ವೀಕರಿಸಿ ಸರಕಾರ ಹಾಗೂ ಹಿರಿಯ ಅಧಿಕಾರಿಗಳ ಗಮನ ಸೆಳೆಯುವುದಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ ಭರವಸೆ ನೀಡಿದರು.