
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಇಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ್ಯಾಚ್ಯುರಿಟ ಹೆಲ್ತ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕುಶಾಲನಗರ ಇದರ ಸಿ.ಇ.ಒ ಆದ ಶ್ರೀಮತಿ. ವೈಶಾಖ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಡಾ.ಲೀಲಾಧರ್ ಡಿ ವಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾದ ಡಾ. ಹರ್ಷಿತ ಎಂ, ಶೈಕ್ಷಣಿಕ ಮುಖ್ಯಸ್ಥರಾದ ಡಾ. ಕವಿತಾ ಬಿ. ಎಂ., ಉಪಸ್ಥಿತರಿದ್ದರು.
