
ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಸಂಧ್ಯಾರಶ್ಮಿ ಸಾಹಿತ್ಯ ಸಂಘದ “ತಿಂಗಳ ಸಾಹಿತ್ಯ ಸಂವಾದ ಮಾಲಿಕೆ ಕಾರ್ಯಕ್ರಮ” ವು ಫೆ.15 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಲಿದ್ದು, ಲೇಖಕರಾದ ಶ್ರೀಮತಿ ಲಲಿತಾಜ ಮಲ್ಲಾರ ರವರ ಸಾಹಿತ್ಯದ ಕುರಿತು ಲೇಖಕರಾದ ಕುಮಾರಸ್ವಾಮಿ ತೆಕ್ಕುಂಜ ರವರು ವಿಚಾರ ಮಂಡನೆ ಮಾಡಲಿದ್ದಾರೆ. ನಿವೃತ್ತ ಶಿಕ್ಷಕರಾದ ಶ್ರೀಮತಿ ತಾರಾಮತಿ ಕಜ್ಜೋಡಿ ರವರು ವ್ಯಕ್ತಿತ್ವ ಪರಿಚಯ ಮಾಡಲಿದ್ದಾರೆ.
ಗಾಯಕರಾದ ಕೆ.ಆರ್ ಗೋಪಾಲಕೃಷ್ಣ ರವರು ಗೀತೆಗಳನ್ನು ಪ್ರಸ್ತುತಪಡಿಸಲಿದ್ದು, ಸಂಧ್ಯಾರಶ್ಮಿ ಸಾಹಿತ್ಯ ಸಂಘದ ಅಧ್ಯಕ್ಷರಾದ ಶ್ರೀಮತಿ ಲೀಲಾ ದಾಮೋದರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಸುಳ್ಯ ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಡಾ| ಎಸ್.ರಂಗಯ್ಯ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ರವರು ಉಪಸ್ಥಿತರಿರಲಿದ್ದು, ಶ್ರೀಮತಿ ರೂಪವಾಣಿ.ಬಿ ಹಾಗೂ ಪ್ರಭಾಕರ ಕಿರಿಭಾಗ ರವರು ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)