
ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜ ಮಂಗಳೂರು ಇದರ ಸಭೆ ಮುಂದೂಡಿಕೆಯಾಗಿದ್ದು, ಫೆ 18 ರಂದು ಕೃಷಿಕ ಸಮಾಜದ ಅಧ್ಯಕ್ಷರಾದ ವಿಜಯ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ಹಾಗೂ ಜಿಲ್ಲೆಯ ಕೃಷಿ ಚಟುವಟಿಕೆ ಬಗ್ಗೆ, ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗದ ಬಗ್ಗೆ ನಡೆಯುವ ಚರ್ಚೆ ಪಾಲ್ಗೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಪ್ರಕಟಣೆ ತಿಳಿಸಿದೆ.
ಸುಳ್ಯ ತಾಲೂಕು ಕೃಷಿಕ ಸಮಾಜದ ಸಭೆ ಫೆ. 17ರಂದು ಸುಳ್ಯದ ಕೃಷಿ ಇಲಾಖೆಯ ಸಭಾಂಗಣದಲ್ಲಿ ನಡೆಯಲಿದೆ.