
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಪ್ರವೇಶ ಪರೀಕ್ಷಾ ತರಬೇತಿ ಶಿಬಿರವು ನಡೆದಿದ್ದು, ಇಲ್ಲಿ ತರಬೇತಿ ಪಡೆದು ಪರೀಕ್ಷೆ ಬರೆದು ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಗುತ್ತಿಗಾರು ಗ್ರಂಥಾಲಯದಲ್ಲಿ ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಸಹಕಾರದೊಂದಿಗೆ ಪ್ರವೇಶ ಪತ್ರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.