- Friday
- February 21st, 2025

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ. ನೂತನ ಸದಸ್ಯರುಗಳಾಗಿ ದೇವಸ್ಥಾನದ ಪ್ರಧಾನ ಅರ್ಚಕ ಕೇಶವ ಮೂರ್ತಿ, ಸತ್ಯ ಪ್ರಸಾದ್ ಕೆ.ಎಸ್. ಗಬ್ಬಲಜೆ, ಮಾಲತಿ ಭೋಜಪ್ಪ ಗೌಡ ಹಾಸ್ಪಾರೆ,ಚಂಚಲಾಕ್ಷಿ ನಾಗೇಂದ್ರ ಎಸ್. ಕುಲ್ಚಾರು, ತಿಮ್ಮಯ್ಯ ಎಂ. ಮೆತ್ತಡ್ಕ, ಬಾಲಕೃಷ್ಣ ಕೆ.ಕೆ. ಕುಂಟುಕಾಡುವಸಂತ ಪಿ.ಜೆ, ಪೆಲ್ತಡ್ಕ, ಯು.ಕೆ. ಕೇಶವ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ಸದನ ರೀಜನಲ್ ಸೆಂಟರ್ ಹೈದರಾಬಾದ್ ಇವರ ಪ್ರಾಯೋಜಕತ್ವದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಅರ್ಥಶಾಸ್ತ್ರ ವಿಭಾಗದಿಂದ ಎರಡು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ...

ಕಂದ್ರಪ್ಪಾಡಿ ಜಾತ್ರೋತ್ಸವದ ಪ್ರಯುಕ್ತ ಫೆ16 ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂದ್ರಪ್ಪಾಡಿಯ ಒಕ್ಕೂಟದ ಸದಸ್ಯರಿಂದ ಶ್ರಮದಾನ ನಡೆಯಿತು. ಸೇವಾಪ್ರತಿನಿಧಿ ತಿಮ್ಮಪ್ಪ ಕಡ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಚಂದ್ರ ಕಾಪಿಲ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.17ರಂದು ನಿಧನರಾದರು. ಅವರಿಗೆ 50 ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಹೊನ್ನಮ್ಮ, ಪತ್ನಿ ಹೇಮಾವತಿ, ಪುತ್ರರಾದ ಮೌರ್ಯ, ಆರ್ಯ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.

33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.18 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...

ಈ ಹಿಂದೆ ವಿವಿಧ ಕಡೆಗಳಲ್ಲಿ ನೀಡಲಾಗುತ್ತಿದ್ದ ಆಧಾರ್ ತಿದ್ದುಪಡಿ ಸೇವೆಯನ್ನು ಪ್ರಸ್ತುತ ಬೆಳ್ಳಾರೆಯಲ್ಲಿ ಮಾತ್ರವೇ ಸೀಮಿತಗೊಳಿಸಿದೆ. ಇದರಿಂದ ಜನ ಸಂಕಷ್ಟ ಪಡುವಂತಾಗಿದೆ. ಒಂದು ದಿನಕ್ಕೆ ಕೇವಲ 15 ಮಂದಿಗೆ ಮಾತ್ರವೇ ಟೋಕನ್ ನೀಡಲು ಸಾದ್ಯ ಎಂದು ಅಧಿಕಾರಿಗಳ ಪಟ್ಟು ಹಿಡಿದಿದ್ದರಿಂದ ಜನ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ನಡೆದಿದೆ. ಈಗ ಬಂದಿರುವವರಿಗೆ ಮುಂದಿನ ದಿನಾಂಕಗಳ ಟೋಕನ್...

ಸುಳ್ಯ ತಾಲೂಕಿನ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಬರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸುಳ್ಯದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಯವರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮನವರಿಕೆ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಸುಳ್ಯ ಶಾಸಕಿ ಮತ್ತು ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.