
ಸುಳ್ಯ ತಾಲೂಕಿನ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಬರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸುಳ್ಯದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಯವರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮನವರಿಕೆ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಸುಳ್ಯ ಶಾಸಕಿ ಮತ್ತು ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.