
ಸುಳ್ಯ ತಾಲೂಕು ಕೃಷಿಕ ಸಮಾಜದ ಮೊದಲ ಸಭೆಯು ಫೆ.17 ರಂದು ಕೃಷಿ ಇಲಾಖೆ ಸಭಾಂಗಣದಲ್ಲಿ ನಡೆಯಿತು. ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಕುಸುಮಾಧರ. ಎ. ಟಿ. ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷರಾದ ಚಂದ್ರ ಕೋಲ್ಚಾರ್, ತಾಲೂಕು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಶ್ಯಾಪ್ರಸಾದ್ ಅಡ್ಡಂತಡ್ಕ, ಕೋಶಾಧಿಕಾರಿ ಸವಿನ್ ಕೊಡಪಾಲ, ಕೃಷಿ ಇಲಾಖೆ ಸಹಾಯಕ ಉಪನಿರ್ದೇಶಕರಾದ ಗುರುಪ್ರಸಾದ್ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅಡಿಕೆಗೆ ಎಲೆ ಚುಕ್ಕಿ ರೋಗ ಮತ್ತು ಹಳದಿ ರೋಗದ ಬಗ್ಗೆ ತಾಲೂಕಿನ 3ಕಡೆ ಮಾಹಿತಿ ಕಾರ್ಯಾಗಾರ ನಡೆಸುವ ಬಗ್ಗೆ, ಮುಂದಿನ ಡಿಸೆಂಬರ್ ಒಳಗಾಗಿ ಕೃಷಿಮೇಳ ಆಯೋಜನೆ, ತಾಲೂಕು ಕೃಷಿಕ ಸಮಾಜಕ್ಕೆ ನೂತನ ಕಾರ್ಯಾಲಯ ರಚನೆ, ಕೃಷಿ ಅಧ್ಯಯನ ಪ್ರವಾಸ ಕೈಗೊಳ್ಳುವ ಬಗ್ಗೆ ಈ ಸಭೆಯಲ್ಲಿ ನಿರ್ಣಯಿಸಲಾಯಿತು. ಕೃಷಿ ಇಲಾಖೆ ಉಪನಿರ್ದೇಶಕರು ಇಲಾಖೆಯ ಸವಲತ್ತುಗಳ ಬಗ್ಗೆ ತಿಳಿಸಿದರು. ತೋಟಗಾರಿಕಾ ಇಲಾಖೆಯ ಸವಲತ್ತುಗಳ ಬಗ್ಗೆ ಸಹಾಯಕ ತೋಟಗಾರಿಕಾ ಅಧಿಕಾರಿ ಅರಬಣ್ಣ ಪೂಜೇರಿ ಇಲಾಖೆಯ ಮಾಹಿತಿ ನೀಡಿದರು. ಕುಮಾರಿ ನಂದಿತಾ ಕಾರ್ಯಕ್ರಮ ನಿರೂಪಿಸಿದರು.