
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಿಸಿ ಫೆ.15 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದರು. ಆದರೇ ಅವರನ್ನು ನೇಮಿಸಿದ್ದಕ್ಕೆ ಅಸಮಾಧಾನಗೊಂಡ ಕೆಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಲ್ಲಿಗೆ ಹೋಗಿ ಆ ಬಗ್ಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರು ರಾಧಾಕೃಷ್ಣ ಬೊಳ್ಳೂರುರವರ ನೇಮಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕ ತಡೆ ನೀಡಿದ್ದಾರೆ.
